ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ ಎಂಎಲ್ಸಿ ಪ್ರಕಾಶ ಹುಕ್ಕೇರಿ
MLC Prakash Hukkeri visited the hospital and inquired about the health of the children.
ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ ಎಂಎಲ್ಸಿ ಪ್ರಕಾಶ ಹುಕ್ಕೇರಿ
ಚಿಕ್ಕೋಡಿ 12: ಚಿಕ್ಕೋಡಿ ತಾಲೂಕಿನ ಹಿರೇಕೊಡಿ ಗ್ರಾಮದ ಅಲ್ಪಸಂಖ್ಯಾತ ಮೋರಾರ್ಜಿ ವಸತಿ ಶಾಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಕಲುಷಿತ ನೀರು ಮತ್ತು ಉಪಹಾರ ಸೇವನೆಯ ಪರಿಣಾಮವಾಗಿ 70ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥರಾಗಿದ್ದಾರೆ. ಇಬ್ಬರ ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾಣಿಸಿದ್ದಾರೆ. ಉಳಿದವರಿಗೆ ಚಿಕ್ಕೋಡಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ವಸತಿ ಶಾಲೆಯಲ್ಲಿ ಎಂದಿನಂತೆ ಮಕ್ಕಳು ಬೆಳಿಗ್ಗೆ ಉಪ್ಪಿಟ್ಟು ಉಪಹಾರ ಸೇವೆ ಮಾಡಿದ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿ ವಾಂತಿ, ಹೊಟ್ಟೆನೋವು ಹಾಗೂ ತಲೆಸುತ್ತು ಕಾಣಿಸಿಕೊಂಡಿದ್ದು ಕೂಡಲೇ ಅಸ್ವಸ್ಥ ಮಕ್ಕಳನ್ನು ತುರ್ತು ಚಿಕಿತ್ಸೆಗಾಗಿ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ದಾಖಲಿಸಿದ್ದಾರೆ.
ಆಸ್ಪತ್ರೆಯಲ್ಲಿ ಮಕ್ಕಳಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ನೆರವು ಒದಗಿಸಲಾಗುತ್ತಿದ್ದು, ಹಲವರ ಆರೋಗ್ಯದಲ್ಲಿ ಹಂತ ಹಂತವಾಗಿ ಸುಧಾರಣೆ ಕಂಡುಬರುತ್ತಿದೆ ಎಂದು ಅಫರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಗಡೇದ ಮಾಹಿತಿ ನೀಡಿದರು.
ಚಿಕ್ಕೋಡಿ ಪಟ್ಟಣದಿಂದ 10 ಕಿ.ಮೀ ಅಂತರದಲ್ಲಿ ಇರುವ ಹಿರೇಕೋಡಿ ಗ್ರಾಮದ ಅಲ್ಪಸಂಖ್ಯಾತ ಮೋರಾರ್ಜಿ ವಸತಿ ಶಾಲೆಯು 6 ನೆಯ ತರಗತಿಯಿಂದ ಪಿಯುಸಿ ವರೆಗೆ ಸುಮಾರು 400 ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಇದರಲ್ಲಿ 37 ಬಾಲಕರು ಮತ್ತು 33 ಬಾಲಕಿಯರು ಸೇರಿ 72 ಕ್ಕೂ ಅಧಿಕ ಮಕ್ಕಳು ಅಸ್ವಸ್ಥಗೊಂಡಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೋಷಕರಲ್ಲಿ ಆತಂಕ ಮೂಡಿದ್ದು, ವಸತಿ ಶಾಲೆ ಮತ್ತು ಆಸ್ಪತ್ರೆಯತ್ತ ಧಾವಿಸಿ ಮಕ್ಕಳ ಆರೋಗ್ಯದ ಕುರಿತು ವೈದ್ಯರ ಬಳಿ ಮಾಹಿತಿ ಪಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಪೋಷಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಕ್ಕಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟದಲ್ಲಿ ನಿರ್ಲಕ್ಷ್ಯ ತೋರಲಾಗುತ್ತಿದೆ. ಪ್ರತಿದಿನ ಮಕ್ಕಳು ಇದೇ ತರಹದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಕ್ಕಳ ಪೋಷಕರು ಬೇಸರ ವ್ಯಕ್ತಪಡಿಸಿದರು.
ಆಸ್ಪತ್ರೆಗೆ ದೌಡಾಯಿಸಿದ ಅಧಿಕಾರಿಗಳು: ವಸತಿ ಶಾಲೆಯ ಮಕ್ಕಳು ಕಲುಷಿತ ಆಹಾರ ಸೇವಿಸಿ ಅಸ್ವಸ್ಥರಾಗಿರುವ ವಿಷಯ ತಿಳಿಯುತ್ತಿದ್ದಂತೆ ಡಿಡಿಪಿಐ ಆರ್.ಎಸ್.ಸೀತಾರಾಮ, ಚಿಕ್ಕೋಡಿ ತಹಶೀಲ್ದಾರ ರಾಜೇಶ ಬುರ್ಲಿ, ಡಿವೈಎಸ್‌ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ವಿಶ್ವನಾಥ ಚೌಗಲಾ ಮತ್ತು ಎಡಿಎಚ್‌ಓ ಡಾ,ಎಸ್.ಎಸ್.ಗಡೇದ ಅವರು ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಮಕ್ಕಳ ಆರೋಗ್ಯ ವಿಚಾರಿಸಿ ವೈದ್ಯರ ಕಡೆಯಿಂದ ಮಾಹಿತಿ ಪಡೆದುಕೊಂಡರು.
ಮಕ್ಕಳ ಆರೋಗ್ಯ ವಿಚಾರಿಸಿದ ಎಂಎಲ್ಸಿ ಪ್ರಕಾಶ ಹುಕ್ಕೇರಿ: ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಕ್ಕಳ ಆರೋಗ್ಯ ಪರಿಸ್ಥಿತಿಯನ್ನು ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ವಿಚಾರಿಸಿ ನಾನು ಇದ್ದೇನೆ ಯಾರು ಹೆದರಬೇಡಿ ಎಂದು ಮಕ್ಕಳಿಗೆ ದೈರ್ಯ ತುಂಬಿದರು. ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ. ಓಷಧಿ ಇಲ್ಲ ಎಂದರೇ ಹೊರಗಿನಿಂದ ಓಷಧಿ ತರಿಸಿಕೊಡುತ್ತೇನೆ. ಯಾವುದೇ ಮಕ್ಕಳಿಗೆ ಅಪಾಯ ಆಗದಂತೆ ವೈದ್ಯರು ಚಿಕಿತ್ಸೆ ಕೊಡಬೇಕು ಎಂದು ಸೂಚಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 