ಎಮ್‌ಪಿ, ಎಮ್‌ಎಲ್‌ಸಿ ಪ್ರದೇಶಾಭಿವೃದ್ಧಿಗಳ ಅನುದಾನದ ಕಾಮಗಾರಿಗಳ ಪ್ರಗತಿ ಪರೀಶೀಲನಾ ಸಭೆ
MP, MLC hold meeting to review progress of area development grant works
ಎಮ್‌ಪಿ, ಎಮ್‌ಎಲ್‌ಸಿ ಪ್ರದೇಶಾಭಿವೃದ್ಧಿಗಳ ಅನುದಾನದ ಕಾಮಗಾರಿಗಳ ಪ್ರಗತಿ ಪರೀಶೀಲನಾ ಸಭೆ
ಗದಗ 09: ಲೋಕಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ಪ್ರದೇಶಾಬಿವೃದ್ಧಿ ಅನುದಾನದಡಿಯಲ್ಲಿ ಕೈಗೊಂಡ ಕಾಮಗಾರಿಗಳ ಕುರಿತಂತೆ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ ಆರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ಪ್ರಗತಿ ಪರೀಶೀಲನೆ ಜರುಗಿತು.
ಎಮ್‌ಪಿ ಹಾಗೂ ಎಮ್‌ಎಲ್‌ಸಿ ಪ್ರದೇಶಾಭಿವೃದ್ಧಿ ಅನುದಾನದಡಿ ಕೈಗೊಂಡ ಕಾಮಗಾರಿಗಳ ಪ್ರಗತಿ ಪರೀಶೀಲನೆಯು ಕೆಡಿಪಿ ಸಭೆಯಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳಲಾಗುತ್ತದೆ. ಕೆಡಿಪಿ ವರದಿಯನ್ನು ನೇರವಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಗಮನಿಸುವರು. ಇದನ್ನೆಲ್ಲ ಅನುಷ್ಟಾನ ಏಜೆನ್ಸಿಗಳು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ನಿರ್ವಹಿಸಬೇಕು ಎಂದರು.
ಕಾಮಗಾರಿ ನಿರ್ವಹಿಸುವಾಗ ನಿಗದಿಪಡಿಸಿದ ಅವಧಿ ಹಾಗೂ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಕಾಮಗಾರಿ ಅನಷ್ಟಾನದಲ್ಲಿ ತೊಡುಕುಗಳು ಎದುರಾದಲ್ಲಿ ತಕ್ಷಣವೇ ಜಿಲ್ಲಾಡಳಿತದ ಹಾಗೂ ಸಂಬಂಧಿಸಿದ ಜನಪ್ರತಿನಿಧಿಗಳ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.
2022-23 ಹಾಗೂ 2023-24ರ ಆರ್ಥಿಕ ವರ್ಷದಲ್ಲಿ ಕೈಗೊಂಡ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು. ಪೂರ್ಣಗೊಳಿಸಿದ ಮಾಹಿತಿಯನ್ನು ಮುಂದಿನ ಒಂದು ವಾರದೊಳಗಾಗಿ ಗಾಂಧೀ ಸಾಕ್ಷಿ ಪೋರ್ಟಲನಲ್ಲಿ ನಿಯಮಾನುಸಾರ ಛಾಯಾಚಿತ್ರಗಳೊಂದಿಗೆ ಅಪ್‌ಲೋಡ್ ಮಾಡಬೇಕು. ವಿನಾಕಾರಣ ನೊಂದಣಿಗೆ ವಿಳಂಬ ಬೇಡ ಎಂದು ಸೂಚಿಸಿದರು.
ಕಾಮಗಾರಿ ಪೂರ್ಣಗೊಳಿಸಿದ ಬಗ್ಗೆ ಥರ್ಡ ಪಾರ್ಟಿ ಪರೀಶೀಲನಾ ವರದಿ ಕಡ್ಡಾಯವಾಗಿದೆ. 2023-24 ರ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅನುಷ್ಟಾನ ಏಜೆನ್ಸಿಗಳು ಅಗಸ್ಟ 20 ರೊಳಗಾಗಿ ಬಾಕಿಉಳಿದ ಅಂದಾಜು ಪಟ್ಟಿ ಸಲ್ಲಿಸಬೇಕು. ಜೊತೆಗೆ ಕಾಮಗಾರಿ ಪೂರ್ಣಗೊಳಿಸಿದ ಕುರಿತಂತೆ ಬಳಕೆ ಪ್ರಮಾಣ ಪತ್ರ ನೀಡಬೇಕು. ಒಟ್ಟಾರೆ ಒದಗಿಸಿದ ಅನುದಾನ ಸದ್ಭಳಕೆಯಾಗುವಂತೆ ಅನುಷ್ಟಾನ ಏಜೆನ್ಸಿಗಳು ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ಕಾಮಗಾರಿ ಬದಲಾವಣೆಗೆ ಬಯಸಿದಲ್ಲಿ ಸಂಬಂಧಿತ ಜನಪ್ರತಿನಿಧಿಗಳಿಂದ ಕಾಮಗಾರಿ ಬದಲಾವಣೆ ಕುರಿತಂತೆ ಮಾಹಿತಿ ಸಲ್ಲಿಸಿ ಕಾಮಗಾರಿ ಮಾರಿ್ಡಸಲು ಅವಕಾಶವಿದ್ದು ಅನುಷ್ಟಾನ ಏಜೆನ್ಸಿಗಳು ಈ ಕುರಿತಂತೆ ಸೂಕ್ತ ಕ್ರಮಗಳನ್ನು ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ ಆರ್ ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ನಿರ್ಮಿತಿ ಕೇಂದ್ರ , ಪಿ ಆರ್ ಇಡಿ, ಕೆ ಆರ್ ಐ ಡಿ ಎಲ್ , ಗ್ರಾಮೀಣ ನೀರು ಸರಬರಾಜು, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಅನುಷ್ಟಾನ ಏಜೆನ್ಸಿ ಹಾಗೂ ಇಲಾಖೆಗಳ ಮುಖ್ಯಸ್ಥರು ಹಾಗೂ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡು ತಮಗೆ ವಹಿಸಿದ ಕಾಮಗಾರಿಗಳ ಕುರಿತು ಪ್ರಗತಿ ವರದಿಯನ್ನು ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 