ರೈಲ್ವೆ ಇಲಾಖೆಗೆ ಧನ್ಯವಾದ ತಿಳಿಸಿದ : ಸಂಸದ ಬಸವರಾಜ ಬೊಮ್ಮಾಯಿ
MP Basavaraja Bommai thanked the Railway Department
ರೈಲ್ವೆ ಇಲಾಖೆಗೆ ಧನ್ಯವಾದ ತಿಳಿಸಿದ : ಸಂಸದ ಬಸವರಾಜ ಬೊಮ್ಮಾಯಿ
ಶಿಗ್ಗಾವಿ : ವಿಜಯಪುರ - ಮಂಗಳೂರು ನಡುವೆ ಸಂಚರಿಸುವ ಮಂಗಳೂರು ಎಕ್ಸ್ ಪ್ರೆಸ್ ರೈಲನ್ನು ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಿರುವ ಕೇಂದ್ರ ರೈಲ್ವೆ ಸಚಿವರು ಹಾಗೂ ಅಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ವಿಜಯಪುರ ಮಂಗಳೂರು ರೈಲಿನ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಿರುವುದರಿಂದ ರಾಜ್ಯದ ಪ್ರಮುಖ ದೇವಸ್ಥಾನಗಳಾದ ಶ್ರೀ ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ ಕ್ಷೇತ್ರಗಳಿಗೆ ಭೇಟಿ ನೀಡಲು ಅನುಕೂಲವಾಗಲಿದೆ ಹಾಗೂ ಬಂದರು ನಗರಿ ಮಂಗಳೂರು ನಗರಕ್ಕೆ ಈ ರೈಲು ನೇರ ಸಂಪರ್ಕವನ್ನು ಒದಗಿಸಲಿದ್ದು ಇದರ ಸದುಪಯೋಗವನ್ನು ಪಡೆಯಬೇಕೆಂದು ಜನತೆಗೆ ಮನವಿ ಮಾಡಿದ್ದಾರೆ.
ನನ್ನ ಕೋರಿಕೆಗೆ ಸ್ಪಂದಿಸಿ ಯಲಿವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಿದ ರೈಲ್ವೆ ಇಲಾಖೆಗೆ ಧನ್ಯವಾದಗಳು. ಯಲವಿಗಿ ರೈಲು ನಿಲ್ದಾಣದಲ್ಲಿ ವಿಜಯಪುರ - ಮಂಗಳೂರು ಎಕ್ಸ್ ಪ್ರೆಸ್ ರೈಲು ಪ್ರತಿದಿನ ರಾತ್ರಿ 9:49 ಗಂಟೆಗೆ ನಿಲುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 