10 ಜನರ ಸಾವಿಗೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ

MP Basavaraja Bommayi condoles the death of 10 people

10 ಜನರ ಸಾವಿಗೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ  

ಶಿಗ್ಗಾವಿ  22: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಅರಬೈಲ್ ಬಳಿ ನಡೆದ ಅಪಘಾತದಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತು ಜನರು ನಿಧನ ಹೊಂದಿರುವ ಸುದ್ದಿ ಮನಸ್ಸಿಗೆ ನೋವುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಸಂತಾಪ ಸೂಚಿಸಿದ್ದಾರೆ.ಈ ಕುರಿತು ಎಕ್ಸ್‌ ಮಾಡಿರುವ ಅವರು, ಮೃತರು ತಮ್ಮ ಉಪ ಜೀವನಕ್ಕಾಗಿತರಕಾರಿ ವ್ಯಾಪಾರ ಮಾಡಿಕೊಂಡಿದ್ದು ಅತ್ಯಂತ ಬಡ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಈ ಘಟನೆಯಲ್ಲಿ ಇನ್ನೂ ಕೆಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸರ್ಕಾರ ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು, ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಅಲ್ಲದೇ ಈ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇವೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಸ್ಥರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.