ಮಧು ಪಾವಲಿ ಶೆಟ್ಟರ್ ಗೆ ರಾಜ್ಯ ಪ್ರಶಸ್ತಿ ಪ್ರಧಾನ
Madhu Pavali Shettar receives state award
ಕೊಪ್ಪಳ 29: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಕ್ಕಾಗಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಮಧು ಶಿವಕುಮಾರ್ ಪಾವಲಿ ಶೆಟ್ಟರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನಿಸಿ ಗೌರವಿಸಿದರು. ನಂತರ ಇನ್ನರ್ ವೀಲ್ ಕ್ಲಬ್ ಕೊಪ್ಪಳದ ಅಧ್ಯಕ್ಷರಾದ ಮಧು ಶಿವಕುಮಾರ್ ಪಾವಲಿ ಶೆಟ್ಟರ್ ಅವರು ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿ ಮಕ್ಕಳ ಕಲ್ಯಾಣ ಕ್ಷೇತ್ರ ಹಾಗೂ ಶಿಕ್ಷಣ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ಪ್ರಶಸ್ತಿ ನೀಡಿದ್ದು ನನಗೆ ಸಂತಸವಾಗಿದೆ ಈ ಪ್ರಶಸ್ತಿಗೆ ಇನ್ನರ್ ವೀಲ್ ಕ್ಲಬ್ ಎಲ್ಲಾ ಪದಾಧಿಕಾರಿಗಳ ಸಹಕಾರದಿಂದ ಉತ್ತಮ ಕೆಲಸ ಮಾಡಿದ್ದೇನೆ ಎಂದರು. ಹರ್ಷ : ಇನ್ನರ್ ವೀಲ್ ಕ್ಲಬ್ ಕೊಪ್ಪಳದ ಅಧ್ಯಕ್ಷರಾದ ಮಧು ಶಿವಕುಮಾರ್ ಪಾವಲಿ ಶೆಟ್ಟರ್ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದರಿಂದ ಇನ್ನರ್ ವೀಲ್ ಕ್ಲಬ್ ಎಲ್ಲಾ ಪದಾಧಿಕಾರಿಗಳು ಹಾಗೂ ಕೊಪ್ಪಳ ತಾಲೂಕಿನ ಸಮಸ್ತ ಬಣಜಿಗ ಸಮಾಜದ ಪದಾಧಿಕಾರಿಗಳು ಹಿರಿಯರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 