ಜಮಖಂಡಿಯಲ್ಲಿ ಮಹಾರಾಣಾ ಪ್ರತಾಪಸಿಂಹ ಜಯಂತಿ ಸಂಭ್ರಮ
Maharana Pratap Singh Jayanti celebrated in Jamkhandi
ಲೋಕದರ್ಶನ ವರದಿ
ಜಮಖಂಡಿ 29: ವೀರ ಶಿರೋಮಣಿ ಮಹಾರಾಣಾ ಪ್ರತಾಪಸಿಂಹ ಅವರ ಜಯಂತಿಯನ್ನು ನಗರದ ಮಹಾರಾಣಾ ಪ್ರತಾಪಸಿಂಹ ರಾಜಪೂತ ಸಮಾಜ ಸೇವಾ ಸಮಿತಿಯಿಂದ ಸೋಮವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಪ್ರಾಧ್ಯಾಪಕ ಎಸ್.ಬಿ. ಮಟೋಳಿ, "ಮಹಾರಾಣಾ ಪ್ರತಾಪಸಿಂಹರು ದೇಶ, ಧರ್ಮ ಮತ್ತು ಸ್ವಾಭಿಮಾನದ ರಕ್ಷಣೆಗಾಗಿ ಹೋರಾಡಿದ ಮಹಾನ್ ಯೋಧ. ಅವರ ತ್ಯಾಗ, ಶೌರ್ಯ ಮತ್ತು ದೇಶಭಕ್ತಿ ಇಂದಿನ ಪೀಳಿಗೆಗೆ ಆದರ್ಶವಾಗಿದೆ" ಎಂದು ಹೇಳಿದರು.
ಮುಖ್ಯ ಅತಿಥಿ ಸಂತೋಷಸಿಂಗ್ ಹಲವಾಯಿ ಮಾತನಾಡಿ, ಮಹಾರಾಣಾ ಪ್ರತಾಪಸಿಂಹರ ಶೌರ್ಯ, ಹಳದಿಘಾಟಿ ಯುದ್ಧದ ಸಾಹಸ ಹಾಗೂ ದೇಶಪ್ರೇಮವನ್ನು ಸ್ಮರಿಸಿದರು. ವಿವಿಧ ಗಣ್ಯರು ಪ್ರತಾಪಸಿಂಹರ ಜೀವನ ಆದರ್ಶಗಳನ್ನು ಯುವಜನರು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 