ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿಗೆ 20 ಪೊಲೀಸರ ಬಲಿ

ಮುಂಬೈ,  ಮೇ   26, ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅದರಲ್ಲೂ ಕೊರೋನಾ ಸಮಯದಲ್ಲಿ ಜನರ ರಕ್ಷಣೆಯಲ್ಲಿ ತೊಡಗಿದ್ದ ಪೊಲೀಸರಿಗೆ ಸೋಂಕು ದಿನೇ  ದಿನೇ ಹೆಚ್ಚಾಗಿ ಅಮರಿಕೊಳ್ಳುತ್ತಿದೆ. ಕಳೆದ 24 ಗಂಟೆಗಳಲ್ಲಿ 80 ಪೊಲೀಸರಿಗೆ ಕೊರೋನಾ ಸೋಂಕು ತಗುಲಿದ್ದು  ಮತ್ತು ಇಬ್ಬರು ಪೊಲಿಸರು ಸಾವನ್ನಪ್ಪಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 1,889 ಪೊಲೀಸರು ಕೊರೋನಾ ಸೋಂಕಿಗೆ ಗುರಿಯಾಗಿದ್ದು, ಸಾವಿನ ಸಂಖ್ಯೆ ಈಗ 20 ಕ್ಕೆ ಏರಿಕೆಯಾಗಿದೆ.