ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕಾರ ಸ್ವೀಕಾರ

Uddhav Thackeray

ಮುಂಬೈ, ನ 29 - ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ಮಧ್ಯಾಹ್ನ ಅಧಿಕಾರ ಸ್ವೀಕರಿಸಿದರು. ಸಚಿವಾಲಯ ಕಟ್ಟಡ’ಮಂತ್ರಾಲಯ’ಕ್ಕೆ ಆಗಮಿಸಿದ ಉದ್ಧವ್ ಠಾಕ್ರೆಯವರು ಅಧಿಕಾರ ಸ್ವೀಕರಿಸುವ ಮುನ್ನ ಕಟ್ಟಡದಲ್ಲಿನ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. 

ಇದಕ್ಕೂ ಮುನ್ನ ಸಚಿವಾಲಯ ಕಟ್ಟಡಕ್ಕೆ ಆಗಮಿಸುವ ಮಾರ್ಗದಲ್ಲಿ ದಕ್ಷಿಣ ಮುಂಬೈನ ಹುತಾತ್ಮ ಚೌಕಕ್ಕೆ ಅವರು ಭೇಟಿ ನೀಡಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು. 

ಕಳೆದ ಸಂಜೆ ಉದ್ಧವ್ ಠಾಕ್ರೆ ಅವರು ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 

ನಗರದ ಶಿವಾಜಿ ಪಾರ್ಕ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾದ ಭಗತ್ ಸಿಂಗ್ ಕೊಶಿಯಾರಿ ಅವರು ಉದ್ಧವ್ ಅವರಿಗೆ ಪ್ರಮಾಣವಚನ ಬೋಧಿಸಿದ್ದರು. ಶಿವಸೇನೆ, ಎನ್‍ಸಿಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಂದ ಮೈದಾನ ಕಿಕ್ಕಿರಿದು ತುಂಬಿತ್ತು. 

ಉದ್ಧವ್ ಠಾಕ್ರೆ ಅವರು ಠಾಕ್ರೆ ಕುಟುಂಬದಲ್ಲಿ ಮುಖ್ಯಮಂತ್ರಿಯಾಗುತ್ತಿರುವ ಮೊದಲಿಗರೆನಿಸಿದ್ದಾರೆ.