ಗುರುದೇವಾಶ್ರಮದ ಆಶ್ರಯದಲ್ಲಿ ಮಹಾಶಿವರಾತ್ರಿ ಮಹೋತ್ಸವ ಆಚರಣೆ
ಜಮಖಂಡಿ 21: ತಾಲ್ಲೂಕಿನ ಹುಲ್ಯಾಳ ಗುರುದೇವಾಶ್ರಮದ ಆಶ್ರಯದಲ್ಲಿ ಮಹಾಶಿವರಾತ್ರಿ ಮಹೋತ್ಸವ ಹಮ್ಮಿಕೊಳ್ಳಲಾಗುವುದು ಎಂದು ಗುರುದೇವಾಶ್ರಮದ ಹರ್ಷಾನಂದ ಮಹಾಸ್ವಾಮಿಗಳು ತಿಳಿಸಿದ್ದಾರೆ. ಮಹಾಶಿವರಾತ್ರಿ ಅಂಗವಾಗಿ ಫೆ.25 ರವರೆಗೆ ಪ್ರತಿದಿನ ಬೆಳಿಗ್ಗೆ 5.30 ರಿಂದ 6.30 ರವರೆಗೆ ಜಪಯೋಗ ಹಮ್ಮಿಕೊಳ್ಳಲಾಗುವುದು. ಫೆ.26 ರಂದು ಬೆಳಿಗ್ಗೆ 5.00 ಗಂಟೆಗೆ ಮಹಾಪೂಜೆ ಹಾಗೂ ಸಾಮೂಹಿಕ ಲಿಂಗಪೂಜೆ ಜರುಗಲಿದೆ. ಅದೇ ದಿನ ಸಂಜೆ 5.00 ಗಂಟೆಗೆ ಮುತ್ತೈದೆಯರ ಉಡಿ ತುಂಬುವ ಕಾರ್ಯಕ್ರಮ ಏರಿ್ಡಸಲಾಗುವುದು. ಫೆ.26 ರ ಸಂಜೆ 6.00 ಗಂಟೆಗೆ ವಿಶೇಷ ಕಾರ್ಯಕ್ರಮಗಳು ಜರುಗಲಿವೆ. ವಿಜಯಪುರ ಜ್ಞಾನಯೋಗಾಶ್ರಮದ ಬಸವಲಿಂಗ ಮಹಾಸ್ವಾಮಿಗಳು ದಿವ್ಯಸಾನ್ನಿಧ್ಯ ವಹಿಸುವರು. ಆಲಮಟ್ಟಿಯ ಪುರವರ ಮಠದ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು, ಜಮಖಂಡಿಯ ಮುತ್ತಿನಕಂತಿ ಹಿರೇಮಠದ ಶಿವಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಮನ್ನಿಕೇರಿಯ ಮಹಾಂತಲಿಂಗೇಶ್ವರ ಮಠದ ವಿಜಯಮಹಾಂತೇಶ್ವರ ಮಹಾಸ್ವಾಮಿಗಳು ಹಾಗೂ ಮೈಗೂರಿನ ಶಿವಾನಂದ ಮಠದಗುರುಪ್ರಸಾದ ಮಹಾಸ್ವಾಮಿಗಳು ಅನುಭಾವ ಹಂಚಿಕೊಳ್ಳುವರು. ತೇರದಾಳ ಶಾಸಕ ಸಿದ್ದು ಸವದಿ, ವಿಧಾನ ಪರಿಷತ್ ಮಾಜಿ ಶಾಸಕ ಜಿ.ಎಸ್. ನ್ಯಾಮಗೌಡ, ಮಾಜಿ ಶಾಸಕ ಆನಂದ ನ್ಯಾಮಗೌಡ, ಉದ್ದಿಮೆದಾರ ಸಂಗಮೇಶ ನಿರಾಣಿ, ಅರ್ಬನ್ ಬ್ಯಾಂಕ್‌ಅಧ್ಯಕ್ಷ ರಾಹುಲ ಕಲೂತಿ, ಹಿರಿಯ ಸಾಹಿತಿ ಸಿದ್ಧರಾಜ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮಠದ ಸರ್ವಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಹಾಶಿವರಾತ್ರಿ ಮಹೋತ್ಸವವನ್ನು ಯಶಸ್ವಿಗೊಳಿಸಲು ತಿಳಿಸಿದ್ದಾರೆ.