ನಾಡು ಕಂಡ ಶ್ರೇಷ್ಠ ನೇತಾರ ಮಹಾತ್ಮ ಗಾಂಧೀಜಿ: ನಾಡೋಜ ಡಾ. ವೂಡೇ ಪಿ. ಕೃಷ್ಣ
Mahatma Gandhiji was the greatest leader the country has ever seen: Dr. Wooday P. Krishna
ಹಾವೇರಿ 04 : ನಾಡು ಕಂಡ ಶ್ರೇಷ್ಠ ನೇತಾರ ಮಹಾತ್ಮ ಗಾಂಧೀಜಿಯವರು ಅಹಿಂಸಾತ್ಮಕ ಪ್ರತಿಭಟನೆ ಮತ್ತು ಸತ್ಯಾಗ್ರಹದಂತಹ ತತ್ವಗಳ ಮೂಲಕ ಭಾರತೀಯ ಸ್ವಾತಂತ್ರ್ಯ ಹೋರಾಟವನ್ನು ಮುನ್ನಡೆಸಿದ ಒಬ್ಬ ಮಹಾನ್ ನಾಯಕರಾಗಿದ್ದಾರೆ ಎಂದು ಬೆಂಗಳೂರು ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ನಾಡೋಜ ಡಾ. ವೂಡೇ ಪಿ. ಕೃಷ್ಣ ಅಭಿಪ್ರಾಯಪಟ್ಟರು.
ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಬೆಂಗಳೂರು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಎನ್.ಎಸ್.ಎಸ್ ಘಟಕ ಒಂದು ಮತ್ತು ಎರಡು ಆಶ್ರಯದಲ್ಲಿ ಜರುಗಿದ ಏಳುದಿನಗಳ ಗಾಂಧೀ ವಿಚಾರ ಪ್ರಣೀತ ರಾಜ್ಯ ಮಟ್ಟದ ಎನ್.ಎಸ್.ಎಸ್. ನಾಯಕತ್ವ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಮೈಲಾರ ಮಹಾದೇವಪ್ಪ ಸ್ಮಾರಕ ಟ್ರಸ್ಟ್ ಸದಸ್ಯ ಎಚ್. ಎಸ್. ಮಹಾದೇವ, ಹಾವೇರಿ ವಿವಿ ಎನ್.ಎಸ್.ಎಸ್. ಸಂಯೋಜನಾಧಿಕಾರಿ ಡಾ. ಸಿ. ಎಸ್. ಕುಮ್ಮೂರು, ಬೆಂಗಳೂರು ಕರ್ನಾಟಕ ಗಾಂಧಿ ಸ್ಮಾರಕ ನಿದಿಯ ಗೌರವ ಕಾರ್ಯದರ್ಶಿ ಎಂ. ಸಿ. ನರೇಂದ್ರ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಡಾಽಽ ಎಸ್. ಎಲ್. ಬಾಲೇಹೊಸೂರು ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜು ಸ್ಥಾನಿಕ ಮಂಡಳಿ ಸದಸ್ಯರಾದ ಜೆ. ಎಸ್. ಅರಣಿ, ಬಸವರಾಜ ಮಾಸೂರು, ಐಕ್ಯುಎಸಿ ಸಂಯೋಜಕಿ ಪ್ರೊ. ರೂಪಾ ಕೋರೆ ಉಪಸ್ಥಿತರಿದ್ದರು.
ಪ್ರಾಚಾರ್ಯ ಪ್ರೊ. ಎಂ. ಎಂ. ಹೊಳ್ಳಿಯವರ ಸ್ವಾಗತಿಸಿದರು. ಜಿಲ್ಲಾ ಎನ್.ಎಸ್.ಎಸ್ ನೋಡಲ್ ಅಧಿಕಾರಿ ಮತ್ತು ಯೋಜನಾಧಿಕಾರಿ ಡಾ. ಶಮಂತಕುಮಾರ್ ಕೆ. ಎಸ್. ಪ್ರಾಸ್ತಾವಿಕ ಮಾತನಾಡಿದರು. ಸ್ವಯಂ ಸೇವಕ ಮಣಿಕಂಠ ಗೊದಮನಿ ನಿರ್ವಹಿಸಿದರು. ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಶಿವಾನಂದ ಪಾಯಮಲ್ಲೆ ವಂದಿಸಿದರು.ಕಾರ್ಯಕ್ರಮದನ್ವಯ ರಾಜ್ಯದ ಪ್ರಮುಖ ವಿಶ್ವವಿದ್ಯಾಲಯಗಳಿಂದ 150 ಜನ ಸ್ವಯಂ ಸೇವಕರು, ಸಂಯೋಜನಾಧಿಕಾರಿಗಳು ಪಾಲ್ಗೊಂಡಿದ್ದರು. ಏಳು ದಿನಗಳ ಕಾಲ ಜರುಗುವ ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ವಿಶೇಷ ಉಪನ್ಯಾಸಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ನಾಯಕತ್ವ ತರಬೇತಿ ಜರುಗಲಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 