ಧಾರವಾಡ 17: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿಂದು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ ಸರಳವಾಗಿ ಜರುಗಿತು. ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಮಹಾವೀರರ ಭಾವಚಿತ್ರಕ್ಕೆ ಪುಷ್ಪ ಗೌರವ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ, ರಂಗಾಯಣ ಆಡಳಿತಾಧಿಕಾರಿ ಕೆ.ಹೆಚ್.ಚನ್ನೂರ, ಸಹಾಯಕ ಚುನಾವಣಾಧಿಕಾರಿ ರಮೇಶ ದೇಸಾಯಿ, ಎನ್ ಐ ಸಿ ಜಿಲ್ಲಾ ಅಧಿಕಾರಿ ಮೀನಾಕುಮಾರಿ ಮತ್ತಿತರರು ಇದ್ದರು.