19 ರಂದು ಮಹಾಯೋಗಿ ವೇಮನ ಜಯಂತಿ
Mahayogi Veman Jayanti on the 19th
ಕಾರವಾರ, ಜ.13 :-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜ.19 ರಂದು ಬೆಳಗ್ಗೆ 10 ಗಂಟೆಗೆ ಮಹಾಯೋಗಿ ವೇಮನ ಜಯಂತಿಯನ್ನು ಕಾರವಾರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ ಕೆ. ಸೈಲ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರಿ್ವ ದೇಶಪಾಂಡೆ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಶಾಸಕರಾದ ಎಸ್. ವಿ.ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಡಿ.ಉಳ್ವೇಕರ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಅಂಕೋಲಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹೇಶ ಬಿ. ನಾಯಕ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಚಿತ್ರ ಶೀರ್ಷಿಕೆ:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರ ಕ್ರೀಡಾ ವಸತಿ ನಿಲಯದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯನ್ನು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಉದ್ಘಾಟಿಸಿದ್ದರು. ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿನಾಯ್ಕ, ಮತ್ತಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 