ಮಹ್ಮದ್ ಹನೀಫ್ ಪಿಡಿಓ ಆಫ್ ದಿ ಮಂತ್ ಪ್ರಶಸ್ತಿ ಪ್ರದಾನ
ಕಾರವಾರ 11: ಜಿಲ್ಲಾ ಮಟ್ಟದ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಗೆ ಜೋಯಿಡಾ ತಾಲೂಕಿನ ಉಳವಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹ್ಮದ್ ಹನೀಫ್ ಸೈಯದ ಆಯ್ಕೆಯಾಗಿದ್ದಾರೆ. ಅವರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರು ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಇಂದು ಪ್ರಮಾಣ ಪತ್ರ, ಪ್ರಶಸ್ತಿ ನೀಡಿ, ಅಭಿನಂದಿಸಿದರು.
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅತ್ಯುತ್ತಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಪ್ರತಿ ತಿಂಗಳು ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಗೆ ನೀಡಲಾಗುತ್ತಿದೆ. ಮಹಮ್ಮದ್ ಕಳೆದ ಡಿಸೆಂಬರ್ 2025 ಅವಧಿಯ ಪ್ರಶಸ್ತಿ ಗೆ ಆಯ್ಕೆಯಾಗಿದ್ದು, ಇಂದು ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಕರೀಂ ಅಸದಿ, ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೆಸ್ತಾ, ಅಭಿವೃದ್ಧಿ ಶಾಖೆಯ ಸಹಾಯಕ ಕಾರ್ಯದರ್ಶಿ ವೀರನಗೌಡ ಪಿ. ಏಗನಗೌಡರ, ಆಡಳಿತ ಶಾಖೆಯ ಸಹಾಯಕ ಕಾರ್ಯದರ್ಶಿ ಸುನೀಲ್ ನಾಯ್ಕ ಉಪಸ್ಥಿತರಿದ್ದರು.