ಲೋಕದರ್ಶನ ವರದಿ
ವಿಜಯಪುರ 04:ಭೀಕರ ಬರಗಾಲವಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ತೋಟಗಾರಿಕೆ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ.ಮನಗೂಳಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ 3ನೇ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರಸ್ತುತ ಜಿಲ್ಲೆಯಲ್ಲಿ ತೀವ್ರ ಬರಗಾಲವಿರುವುದರಿಂದ ಇಂತಹ ಸಂದರ್ಭಧಲ್ಲಿ ಜನರ ಸಮಸ್ಯೆಗಳೊಂದಿಗೆ ಆಟವಾಡಬೇಡಿ, ಸಮಸ್ಯೆಯನ್ನು ಉಲ್ಭಣಗೊಳಿಸಬೇಡಿ, ಸಕಾಲದಲ್ಲಿ ಸ್ಪಂದಿಸಿ, ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.
ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಕುಡಿಯುವ ನೀರಿನ ಅಭಾವ ಹೆಚ್ಚಾಗಿದ್ದು, ಟ್ಯಾಂಕರ್ ಮೂಲಕ ನೀರು ಪೂರೈಸಿದರೂ ಸಮಸ್ಯೆ ಪರಿಹಾರವಾಗುತ್ತಿಲ್ಲ. ಅಂತಹ ಪ್ರದೇಶಗಳಲ್ಲಿ ಖಾಸಗಿ ಬೊರವೆಲ್ಗಳ ಮಾಲೀಕರ ಸಹಕಾರದಿಂದ ನೀರನ್ನು ಒದಗಿಸಲು ಸಾಧ್ಯವಿರುವ ಪ್ರಯತ್ನ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಈಗಾಗಲೇ 9 ಮೇವಿನ ಬ್ಯಾಂಕ್ಗಳನ್ನು ಆರಂಭಿಸಲಾಗಿದೆ. ಜಿಲ್ಲೆಯ ಮೇವು ಹೊರರಾಜ್ಯಗಳಿಗೆ ಹೋಗದಂತೆ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿದ್ದರೂ ಕೂಡ ಮೇವು ಹೊರರಾಜ್ಯಗಳಿಗೆ ಸಾಗಾಣಿಕೆಯಾಗುತ್ತಿರುವುದು ಕಂಡು ಬಂದಿದ್ದು, ಈ ಕುರಿತಂತೆ ಅಧಿಕಾರಿಗಳು ಕ್ರಮ ವಹಿಸದಿದ್ದರೆ ಸಂಬಂಧಿಸಿದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ಪಶು ವೈದ್ಯರ ಕೊರತೆಯಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳ ಚಿಕಿತ್ಸೆಗಾಗಿ ತುತರ್ು ಸಂದರ್ಭದಲ್ಲಿ ವೈದ್ಯರು ಲಭ್ಯವಿರುವುದಿಲ್ಲ. ಆದ್ದರಿಂದ ಹೆಚ್ಚಿನ ವೈದ್ಯರ ನೇಮಕಾತಿಗೆ ಸಕರ್ಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ತಮಗೆ ಸಂಬಂಧಿಸಿದ ಆಸ್ಪತ್ರೆಯಲ್ಲಿ ತಾವು ಲಭ್ಯವಿರುವ ಸಮಯದ ಅವಧಿ ಹಾಗೂ ತಮ್ಮ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಆಸ್ಪತ್ರೆ ಗೋಡೆಗಳಲ್ಲಿ ಪ್ರದಶರ್ಿಸಲು ಆದೇಶಿಸುವಂತೆ ಪಶುಸಂಗೋಪನಾ ಇಲಾಖೆ ಉಪನಿದರ್ೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯ ಜನಪ್ರತಿನಿಧಿಗಳು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳ ಕುರಿತು ಮಾಹಿತಿ ನೀಡಲು ಅಥವಾ ಚಚರ್ಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಸಂಪಕರ್ಿಸಿದರೆ ದೂರವಾಣಿ ಕರೆಗಳನ್ನು ಸ್ವೀಕರಿಸುವುದಿಲ್ಲ. ಮರಳಿ ಸಂಪರ್ಕ ಮಾಡುವ ಪ್ರಯತ್ನವೂ ಮಾಡುವುದಿಲ್ಲ. ಇದರಿಂದ ಜನರ ಸಮಸ್ಯೆ ಬಗೆಹರಿಸಲು ಹೇಗೆ ಸಾಧ್ಯ? ಇನ್ನು ಮುಂದೆ ಇಂತಹ ಘಟನೆ ಮರುಕಳಿಸಿದಂತೆ ಎಚ್ಚರ ವಹಿಸಬೇಕು. ಜನಪ್ರತಿನಿಧಿಗಳ ಕರೆಗಳನ್ನು ಸ್ವೀಕರಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ತೊಗರಿ ಖರೀದಿ ಪ್ರಕ್ರಿಯೆಯನ್ನು ತೀವ್ರಗೊಳಿಸಬೇಕು. ನಿಂಬೆ ಬೆಳೆ ಹಾಗೂ ದ್ರಾಕ್ಷಿ ಬೆಳೆಗಳಿಗೆ ಸಾಧ್ಯವಿರುವ ಜಲಮೂಲಗಳ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷೆ ಸಮಯವಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ತೋಟದ ವಸ್ತಿಗಳಲ್ಲಿ ರಾತ್ರಿ ಸಮಯದಲ್ಲಿ ವಿದ್ಯುತ್ ಕಡಿತವಾಗದಂತೆ ಎಚ್ಚರ ವಹಿಸಲು ಸೂಚನೆ ನೀಡಿದರು.
ಮೇವು ಬ್ಯಾಂಕ್ ಸ್ಥಾಪನೆ, ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಂಬಂಧಿಸಿದಂತೆ ಸಕರ್ಾರದಿಂದ ಅನುದಾನದ ಯಾವುದೇ ಕೊರತೆ ಇಲ್ಲ ಎಂಬ ಜಿಲ್ಲಾಧಿಕಾರಿಗಳ ಸ್ಪಷ್ಠೀಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಆದ್ಯತೆಯನುಸಾರ ಕ್ರೀಯಾಯೋಜನೆಗಳನ್ನು ರೂಪಿಸಿ, ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಿ, ಅನುದಾನವನ್ನು ಸಮರ್ಪಕವಾಗಿ ಬಳಸಿ ಸಕಾಲದಲ್ಲಿ ಸೌಲಭ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ನಾಗಠಾಣ ಶಾಸಕ ಡಾ.ದೇವಾನಂದ ಚವ್ಹಾಣ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಶಿವಯೋಗೆಪ್ಪ ನೇದಲಗಿ, ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ, ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಜಿಲ್ಲಾ ಪಂಚಾಯತ್ ಉಪ ಕಾರ್ಯದಶರ್ಿ ಅಮರೇಶ ನಾಯಕ, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.