ಡೆಂಗ್ಯೂ ನಿಯಂತ್ರಣಕ್ಕೆ ಮಳೆ ನೀರು, ತ್ಯಾಜ್ಯಗಳ ವ್ಯವಸ್ಥಿತ ನಿರ್ವಹಣೆ ಮಾಡಿ: ಲೀಲಾವತಿ ಸೂಚನೆ
ಹಾವೇರಿ: ಮಳೆ ಆರಂಭಕ್ಕೂ ಮುನ್ನವೇ ಡೆಂಗ್ಯೂ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಆರೋಗ್ಯ, ಶಿಕ್ಷಣ, ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಆಡಳಿತಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಕೆ.ಲೀಲಾವತಿ ಅವರು ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಷ್ಟ್ರೀಯ ಡೆಂಗ್ಯೂ ನಿಯಂತ್ರಣ ಮುನ್ನೆಚ್ಚರಿಕೆ ಕುರಿತಂತೆ ಶುಕ್ರವಾರ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜೂನ್ ಮತ್ತು ಅಕ್ಟೋಬರ್ ಡೆಂಗ್ಯೂ ಹರಡುವಿಕೆಗೆ ಪ್ರಶಸ್ತ ಕಾಲವಾಗಿದೆ. ಶುದ್ಧ ನೀರಿನ ನಿಲ್ಲುವಿಕೆಯಿಂದ ಡೆಂಗ್ಯೂ ಜ್ವರಕ್ಕೆ ಕಾರಣವಾಗುವ ಈಡೀಸ್ ಈಜಿಪ್ತಿ ಸೊಳ್ಳೆಗಳು ಉತ್ಪತ್ತಿಯಾಗುತ್ತದೆ. ಈ ಸೊಳ್ಳೆಗಳ ನಿಯಂತ್ರಣಕ್ಕೆ ವಿವಿಧ ಇಲಾಖೆಗಳ ಪಾತ್ರ ಪ್ರಮುಖವಾಗಿವೆ ಎಂದು ತಿಳಿಸಿದರು.
ಡೆಂಗ್ಯೂ ಜ್ವರಕ್ಕೆ ಯಾವುದೇ ನಿಧರ್ಿಷ್ಟ ಔಷಧಿ ಅಥವಾ ಲಸಿಕೆ ಇರುವುದಿಲ್ಲ. ಮುನ್ನೆಚ್ಚರಿಕೆ ಕ್ರಮದಿಂದ ಡೆಂಗ್ಯೂ ನಿಯಂತ್ರಣ ಮಾಡಬಹುದು. ಯಾವುದೇ ಗಾಬರಿಗೆ ಒಳಗಾಗದೆ ಜ್ವರದ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪಕರ್ಿಸಿ ಸಕಾಲಕ್ಕೆ ಚಿಕಿತ್ಸೆ ಪಡೆದುಕೊಳ್ಳಬೇಕು. ನಿಂತ ಶುದ್ಧ ನೀರಿನಲ್ಲಿ ಹಗಲು ವೇಳೆಯಲ್ಲಿ ಡೆಂಗ್ಯು ಸೊಳ್ಳೆಗಳು ಉತ್ಪತ್ತಿಯಾಗುತ್ತವೆ.
ಈ ಸೊಳ್ಳೆಗಳ ಸಂತಾನಹರಣವೇ ಡೆಂಗ್ಯೂ ನಿಯಂತ್ರಣಕ್ಕೆ ಮುಖ್ಯವಾಗುತ್ತದೆ. ಈ ಕುರಿತಂತೆ ಸಮುದಾಯದ ಜನರಿಗೆ ವ್ಯಾಪಕ ಅರಿವು ಮತ್ತು ಜಾಗೃತಿ ಮೂಡಿಸುವಂತೆ ಸಲಹೆ ನೀಡಿದರು.
ಶಾಲೆ ಮತ್ತು ಅಂಗನವಾಡಿ ಪ್ರದೇಶದ ಸುತ್ತಮುತ್ತ ಸೊಳ್ಳೆಮುಕ್ತ ವಾತಾವರಣ ಕಲ್ಪಿಸುವುದು, ಶಾಲಾ ಮಕ್ಕಳಿಗೆ ಮಳೆಗಾಲದ ಸಂದರ್ಭದಲ್ಲಿ ಮೈತುಂಬ ಉಡುಪು ಧರಿಸುವಂತೆ ಕ್ರಮವಹಿಸುವುದು, ಶಾಲಾ ಮಕ್ಕಳ ಮೂಲಕ ಪೋಷಕರಿಗೆ ಡೆಂಗ್ಯೂ ಮುನ್ನೆಚ್ಚರಿಕೆ ಕುರಿತಂತೆ ಜಾಗೃತಿ ಮೂಡಿಸಲು ಶಿಕ್ಷಕರು ಹಾಗೂ ಮುಖ್ಯೋಪಾದ್ಯಾಯರು ಕ್ರಮವಹಿಸಬೇಕು. ಈ ಕುರಿತಂತೆ ಶಿಕ್ಷಣ ಇಲಾಖಾ ಅಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಸಭೆ ಕರೆದು ಜಾಗೃತಿ ಮೂಡಿಸಲು ಸಿ.ಇ.ಓ. ಕೆ.ಲೀಲಾವತಿ ಅವರು ಸೂಚಿಸಿದರು.
ಮುನ್ನೆಚ್ಚರಿಕೆ ಕ್ರಮಗಳೇ ಡೆಂಗ್ಯೂ ನಿಯಂತ್ರಣಕ್ಕೆ ಒಳ್ಳೆಯ ಔಷಧಿ. ಡೆಂಗ್ಯೂ ವೈರಸ್ನಿಂದ ಜ್ವರ ಹರಡುತ್ತದೆ. ನಾಲ್ಕು ಬಗೆಯ ವೈರಸ್ಗಳು ಡೆಂಗ್ಯೂಗೆ ಕಾರಣವಾಗಿವೆ. ಈಡೀಸ್ ಈಜಿಪ್ತಿ ಸೊಳ್ಳೆ ಕಚ್ಚುವುದರಿಂದ ಈ ರೋಗ ಹರಡುತ್ತದೆ. ರೋಗವಾಹಕವಾದ ಈ ಸೊಳ್ಳೆಗಳ ನಿಯಂತ್ರಣಕ್ಕೆ ಎಲ್ಲ ಇಲಾಖೆಗಳು ಮುನ್ನೆಚ್ಚರಿಕೆ ವಹಿಸಬೇಕು. ಜೂನ್ನಿಂದ ಅಕ್ಟೋಬರ್ವರೆಗೆ ಈ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ ಎಂದು ವಿವರಿಸಿದರು.
ವಿಪರಿತ ಜ್ವರ, ದೇಹದ ಮೇಲೆ ಸಣ್ಣ ಸಣ್ಣ ಗಂದೆಗಳು, ಕಣ್ಣುಗಳ ಹಿಂಭಾಗ, ಮಾಂಸಖಂಡ ಹಾಗೂ ಕೀಲುಗಳಲ್ಲಿ ವಿಪರಿತ ನೋವು, ತಲೆನೋವು, ಬಾಗಿ, ಮೂಗು, ವಸಡುಗಳಿಂದ ರಕ್ತಸ್ರಾವ ಡೆಂಗ್ಯುವಿನ ಲಕ್ಷಣವಾಗಿವೆ. ರಕ್ತ ಪರೀಕ್ಷೆ ಮಾಡಿಸುವುದರ ಮೂಲಕ ಈ ರೋಗ ಪತ್ತೆಮಾಡಬಹುದು ಎಂದು ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಘವೇಂದ್ರಸ್ವಾಮಿ ಹಾಗೂ ವಿವಿಧ ತಾಲೂಕು ಆರೋಗ್ಯಾಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಣ, ಭೂ ಮತ್ತು ಗಣಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 