ಮನುಷ್ಯನ ಜ್ಞಾನವನ್ನು ಹೆಚ್ಚಿಸುವ ಅಮೂಲ್ಯ ಸಮಯವನ್ನು ಸದುಪಯೋಗಪಡಿಸಿಕೊಳ್ಳಿ : .ಮೆಣಸಿನಕಾಯಿ
Make good use of the precious time of increasing man's knowledge : .Chili
ಮನುಷ್ಯನ ಜ್ಞಾನವನ್ನು ಹೆಚ್ಚಿಸುವ ಅಮೂಲ್ಯ ಸಮಯವನ್ನು ಸದುಪಯೋಗಪಡಿಸಿಕೊಳ್ಳಿ : .ಮೆಣಸಿನಕಾಯಿ
ಕಲಾದಗಿ 14: ಗ್ರಂಥಾಲಯಗಳು ಮನುಷ್ಯನ ಜ್ಞಾನವನ್ನು ಹೆಚ್ಚಿಸುವ ಮತ್ತು ಅಮೂಲ್ಯ ಸಮಯವನ್ನು ಸದುಪಯೋಗಪಡಿಸುವ ಸಾಧನಗಳಾಗಿವೆ ಎಂದು ಕಲಾದಗಿ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಗ್ರಂಥಪಾಲಕ ಸಿ.ವಾಯ್.ಮೆಣಸಿನಕಾಯಿ ಹೇಳಿದರು.ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಅಡಿಯಲ್ಲಿ ಗ್ರಂಥಾಲಯ ವಿಜ್ಞಾನ ವಿಭಾಗದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಗ್ರಂಥಾಲಯದ ಮಹತ್ವ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡುತ್ತಾ ಇಂದು ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಯುವಕರು ಮೊಬೈಲ್ ಹಿಡಿದುಕೊಂಡು ಕಾಲಹರಣ ಮಾಡುತ್ತಿದ್ದಾರೆ. ತಮ್ಮ ಉಜ್ವಲ ಭವಿಷ್ಯಕ್ಕಾಗಿ ಗ್ರಂಥಾಲಯಕ್ಕೆ ಹೋಗಿ ಪುಸ್ತಕಗಳನ್ನು ಓದಿ ಜ್ಞಾನವನ್ನು ಪಡೆದುಕೊಳ್ಳಬಹುದು. ಪುಸ್ತಕದಿಂದ ಕಲಿತ ಜ್ಞಾನದಿಂದ ಸ್ಪರ್ಧಾತ್ಮಕ ಮತ್ತು ಉನ್ನತ ಪರೀಕ್ಷೆ ಬರೆದು ಯಶಸ್ಸು ಸಾಧಿಸಬಹುದೆಂದರು.ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಡಾ.ಎಚ್.ಬಿ.ಮಹಾಂತೇಶ ಮಾತನಾಡುತ್ತಾ, ಒಂದು ಪುಸ್ತಕ ನೂರು ಸ್ನೇಹಿತರಿಗೆ ಸಮ ಎಂದು ಭಾವಿಸಲಾಗುತ್ತದೆ. ವಿದ್ಯಾರ್ಥಿಗಳ ಓದಿಗೆ ಗ್ರಂಥಾಲಯ ಅವಶ್ಯವಾಗಿವೆ. ಕಾಲೇಜಿನ ಗ್ರಂಥಾಲಯದಲ್ಲಿನ ಪುಸ್ತಕಗಳ ಬಳಕೆ ಮಾಡಿಕೊಂಡು ತಮ್ಮ ಜ್ಞಾನವನ್ನು ವೃದ್ದಿಸಿಕೊಳ್ಳಬೇಕೆಂದರು.ಉಪನ್ಯಾಸಕಿ ಶ್ರಿದೇವಿ ಮುಂಡಗನೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರು, ಐಕ್ಯೂಎಸಿ ಸಂಚಾಲಕರಾದ ಪ್ರೊ.ಸರೋಜಿನಿ ಹೊಸಕೇರಿ ಸೇರಿದಂತೆ ಎಲ್ಲ ಉಪನ್ಯಾಸಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.ಕು.ಯಂಕಮ್ಮ ಸ್ವಾಗತಿಸಿದರು.ಕು.ಶುಷ್ಮಾ ಗುರಿಕಾರ ನಿರೂಪಿಸಿದರು.ಕು.ರೂಪಾ ಸಂಶಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 