ಕ್ರೀಡೆಗಳನ್ನು ಹವ್ಯಾಸಗಳನ್ನಾಗಿ ರೂಢಿಸಿಕೊಳ್ಳಿ: ಶಾಸಕ ವೈದ್ಯ ಕರೆ
Make sports a hobby
ಸವದತ್ತಿ 09: ಕ್ರೀಡೆಗಳು ಧೈರ್ಯ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವುದರ ಜೊತೆಗೆ ಯುವಕರಲ್ಲಿ ಧೈರ್ಯ ಮತ್ತು ಸಾಹಸದಂತಹ ಗುಣಗಳನ್ನು ವೃದ್ಧಿಸುತ್ತವೆ. ಅದಕ್ಕಾಗಿ ಕ್ರೀಡೆಗಳನ್ನು ಒಳ್ಳೆಯ ಹವ್ಯಾಸಗಳನ್ನಾಗಿ ಜೀವನದಲ್ಲಿ ರೂಢಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಶಾಸಕ ವಿಶ್ವಾಸ ವಸಂತ ವೈದ್ಯ ರವರು ಕರೆ ನೀಡಿದರು.
ಸರ್ಕಾರಿ ಪ್ರೌಢಶಾಲೆ ಕಗದಾಳದಲ್ಲಿ 2025-26 ನೇ ಸಾಲಿನ ಹುಲಿಕಟ್ಟಿ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಕ್ರೀಡಾಕೂಟ ಉದ್ಘಾಟಿಸಿ ಮೇಲಿನಂತೆ ಅಭಿಪ್ರಾಯಪಟ್ಟರು. ಅಲ್ಲದೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜನತಾ ಕಾಲೋನಿ ಕಗಧಾಳದ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಅವುಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಲು ಕರೆನೀಡಿದರು. ಕ್ರೀಡಾ ಧ್ವಜವನ್ನು ನೆರವೇರಿಸಿ ಮಾತನಾಡಿದ ಮಾಜಿ ಶಾಸಕ ಆರ್ ವ್ಹಿ ಪಾಟೀಲ್ ರವರು ಕ್ರೀಡೆಗಳನ್ನು ಸ್ಪರ್ಧಾತ್ಮಕವಾಗಿ ಆಡಲು ಮತ್ತು ಯಾವುದೇ ಗಲಾಟೆಗಳಾಗದಂತೆ ನೋಡಿಕೊಳ್ಳಲು ತಿಳಿಸಿದರು. ಅಲ್ಲದೇ ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಸಂಘಟಿಸಿರುವುದನ್ನು ನೋಡಿ ಪ್ರಶಂಸಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣರಡ್ಡಿ ಸವದತ್ತಿರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯ ಮೇಲೆ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಶಂಕ್ರಮ್ಮ ಹಳಕಟ್ಟಿ, ಪ್ರೌಢ ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷ ಮಾಯಪ್ಪ ರಾ ಜೋತೆನ್ನವರ, ಪ್ರಾಥಮಿಕ ಶಾಲೆಯ ಎಸ್‌ಡಿಎಮ್‌ಸಿ ಅಧ್ಯಕ್ಷ ಬಸವರಾಜ ಕುಂಬಾರ, ಉಪಾಧ್ಯಕ್ಷ ಫಕೀರ್ಪ ಅಪನಾಯ್ಕರ್. ಗ್ರಾಮ ಪಂಚಾಯಿತಿ ಸದಸ್ಯರಾದ ಎಮ್ ವಾಯ್ ರಾಯನಗೌಡ್ರ, ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಯಲರಡ್ಡಿ ವೆಂ ಹುಚರಡ್ಡಿ, ಪಿ ಎನ್ ಕೌಜಲಗಿ, ಕೆ ಆರ್ ನದಾಫ, ಎಸ್ ಎಸ್ ವಾಗೇರಿ, ಎಮ್ ಎನ್ ಕರಡಿಗುಡ್ಡ, ಎಸ್ ಎಮ್ ಕುಂಬಾರ, ಸಂತೋಷ ನಿಂಗರಡ್ಡಿ ಹಾಗೂ ಇತರರು ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯ ಆರ್ ಸಿ ರಾಠೋಡ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಕ ಡಿ ಬಿ ಕೊಡ್ಲಿ ನಿರೂಪಿಸಿದರು. ಶಿಕ್ಷಕ ಎಸ್ ವ್ಹಿ ಶೆಟ್ಟರ್ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 