ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೋಳಿಸಿ: ಕೇಂದ್ರ ಸಚಿವ ಜೋಶಿ
ಶಿಗ್ಗಾವಿ 11 : ಭಾರತ ಸರ್ಕಾರದ ಬಜೆಟ್ ಅಧಿವೇಶನವಿರುವ ಕಾರಣ ಪಟ್ಟಣದಲ್ಲಿ ನಡೆಯುತ್ತಿರುವ 5 ನೇ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರಲು ಆಗುತ್ತಿಲ್ಲ ಆದ್ದರಿಂದ ನಾನು ವಿಷಾಧಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಹೇಳಿದರು. ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡಿದ ಶ್ರೇಷ್ಠ ಕವಿ, ತತ್ವಜ್ಞಾನಿ ಕನಕದಾಸರು ಹಾಗೂ ಸಂತ ಶಿಶುನಾಳ ಶರೀಫರ ತವರೂರಾದ ಶಿಗ್ಗಾವಿಯಲ್ಲಿ ಐದನೇವರ್ಷದ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನವು ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಈ ಸಮ್ಮೇಳನವು ನಮ್ಮ ನಾಡಿನ ಸಾಹಿತ್ಯ ಪರಂಪರೆಯನ್ನು ಎತ್ತಿ ಹಿಡಿಯುವಲ್ಲಿ ಮತ್ತು ಕನ್ನಡ ಭಾಷೆಯನ್ನು ಮತ್ತಷ್ಟು ಉತ್ತುಂಗಕ್ಕೇರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ನಂಬಿಕೆ ನನಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಶಿಗ್ಗಾವಿ ತಾಲೂಕ ಘಟಕವು ಏರಿ್ಡಸಿರುವ ಈ ಸಮ್ಮೇಳನದಲ್ಲಿ ನಾಡಿನ ವಿವಿಧ ಭಾಗಗಳಿಂದ ಸಾಹಿತಿಗಳು, ಕವಿಗಳು, ವಿದ್ವಾಂಸರು ಮತ್ತು ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೋಳಿಸಿ ಎಂದರು.