ಶಕ್ತಿ ಯೋಜನೆ ಯಶಸ್ವಿಗೊಳಿಸಿ ನೌಕರರ ಋಣ ತೀರಿಸಿ ಸಾರಿಗೆ ಸಂಸ್ಥೆಗಳ ನೌಕರರ ಬೇಡಿಕೆಗಳನ್ನು ಶೀಘ್ರ ಈಡೇರಿಸಿ: ಕೆಂಗನಾಳ ಆಗ್ರಹ
Make the Shakti Yojana a success, pay off the debts of the employees and fulfill the demands of the
ಶಕ್ತಿ ಯೋಜನೆ ಯಶಸ್ವಿಗೊಳಿಸಿ ನೌಕರರ ಋಣ ತೀರಿಸಿ ಸಾರಿಗೆ ಸಂಸ್ಥೆಗಳ ನೌಕರರ ಬೇಡಿಕೆಗಳನ್ನು ಶೀಘ್ರ ಈಡೇರಿಸಿ: ಕೆಂಗನಾಳ ಆಗ್ರಹ
ವಿಜಯಪುರ 05: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಯಲ್ಲಿಯೇ ಮಹತ್ವಾಂಕ್ಷಿ ಗ್ಯಾರಂಟಿಯಾದ ಶಕ್ತಿ ಯೋಜನೆಯನ್ನು 100 ಕ್ಕೂ 100 ರಷ್ಟು ಯಶಸ್ವಿಗೊಳಿಸಿದ ಕೀರ್ತಿ ಸಾರಿಗೆ ಇಲಾಖೆಯ ನೌಕರರಿಗೆ ಸಲ್ಲಬೇಕು. ಹೀಗಾಗಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಬೇಡಿಕೆಗಳನ್ನು ಈಡೇರಿಸುವ ಮೂಲಕ ಸಾರಿಗೆ ನೌಕರರ ಋಣವನ್ನು ರಾಜ್ಯ ಸರ್ಕಾರ ತೀರಿಸಬೇಕು ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಒತ್ತಾಯಿಸಿದ್ದಾರೆ.
ಮಂಗಳವಾರ ತಮ್ಮ ಪತ್ರಿಕಾ ಪ್ರಕಟಣೆ ಮೂಲಕ ವಿಷಯ ತಿಳಿಸಿದ ಅವರು, 38 ತಿಂಗಳ ವೇತನ ಹೆಚ್ಚಳ, ಹಿಂಬಾಕಿ ಪಾವತಿ ಮತ್ತು 2024ರ ಜನವರಿಯಿಂದ ಹೊಸದಾಗಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ನಡೆಸಿರುವ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರಕ್ಕೆ ರೈತ ಭಾರತ ಪಕ್ಷದಿಂದ ಬೆಂಬಲ ಸೂಚಿಸಿ ನೌಕರರ ವಿರುದ್ಧ ಸರ್ಕಾರ ಏನಾದರೂ ಕ್ರಮಕ್ಕೆ ಮುಂದಾದರೇ ನೌಕರರ ಪರವಾಗಿ ಹೋರಾಟ ಮಾಡಲು ಪಕ್ಷ ಬೀದಿಗೆ ಇಳಿಯುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಹಿಂಜರಿಯುವ ಸರ್ಕಾರ ತಮ್ಮ ಶಾಸಕರ ವೇತನ ಹೆಚ್ಚಳ ಮಾಡುವಾಗ ಯಾವ ಶಾಸಕರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದರು? ಅವರಿಗೇಕೆ ವೇತನ ಹೆಚ್ಚಳ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
ತಮ್ಮ ಬೇಡಿಕೆಗಳಿಗೆ ಬದ್ಧರಾಗಿರುವ ಸಾರಿಗೆ ನೌಕರರು ತಮ್ಮ ನಿರ್ಧಾರದಿಂದ ಹಿಂದೆ ಸರಿಯದೇ ಮಂಗಳವಾರ ಬೆಳಗ್ಗೆಯಿಂದಲೇ ಮುಷ್ಕರ ನಡೆಸಿರುವುದರಿಂದ ರಾಜ್ಯಾದ್ಯಂತ ಬಸ್‌ಗಳ ಸೇವೆ ವ್ಯತ್ಯಯವಾಗಿ ಸುಮಾರು 1 ಕೋಟಿಗೂ ಹೆಚ್ಚು ಪ್ರಯಾಣಿಕರು ಪರದಾಡಿದ್ದು, ಇದಕ್ಕೆ ಸರ್ಕಾರದ ಅವಿವೇಕತನವೇ ಕಾರಣವಾಗಿದೆ. ನೌಕರರ ಬೇಡಿಕೆಗಳಿಗೆ ಸ್ಪಂದಿಸಿದ್ದರೇ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗುತ್ತಿರಲಿಲ್ಲ ಎಂದು ಕಿಡಿಕಾರಿದ್ದಾರೆ.
ಮಾತುಕತೆ ವಿಫಲತೆಗೆ ಸರ್ಕಾರ ದಿವಾಳಿತನದ ಕೈಗನ್ನಡಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರ ಸಂಘಟನೆಗಳು ಹಾಗೂ ಸರ್ಕಾರದ ನಡುವೆ ನಡೆದ ಮಾತುಕತೆ ವಿಫಲವಾಗಲು ಸಿಎಂ ಸಿದ್ದರಾಮಯ್ಯನವರ ಸರ್ಕಾರದ ದಿವಾಳಿತನಕ್ಕೆ ಹಿಡಿದ ಕೈಗನ್ನಡಿಯಾಗಿದೆ. ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ. ಕೇವಲ 14 ತಿಂಗಳ ಹಿಂಬಾಕಿ ನೀಡಲು ಸಿದ್ಧ ಎಂದು ಹೇಳುವ ಸಿಎಂ ಸಿದ್ದರಾಮಯ್ಯನವರ ಖಜಾನೆಯಲ್ಲಿ ಹಣವಿಲ್ಲ ಎನ್ನುವುದನ್ನು ಎತ್ತಿ ತೊರಿಸುತ್ತದೆ. ನಿಮ್ಮ ಶಕ್ತಿ ಯೋಜನೆ ಯಶಸ್ವಿ ಮಾಡಲು ಸಾರಿಗೆ ನೌಕರರು ಬೇಕು. ಅವರ ಬೇಡಿಕೆ ಈಡೇರಿಸಲು ಮಾತ್ರ ನೌಕರರು ಬೇಡವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2020ರ ಜನವರಿಯಿಂದ 2023ರ ಫೆಬ್ರವರಿವರೆಗಿನ 38 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಹಾಗೂ 2024ರ ಜನವರಿಯಿಂದ ಅನ್ವಯವಾಗುವಂತೆ ಹೊಸದಾಗಿ ವೇತನವನ್ನು ಹೆಚ್ಚಳ ಮಾಡುವಂತೆ ಸಾರಿಗೆ ನೌಕರರ ಸಂಘಟನೆಗಳ ಬೇಡಿಕೆ ನ್ಯಾಯುತವಾಗಿದ್ದು, ಹೆಸ್ಕಾಂ ಸೇರಿದಂತೆ ಪೊಲೀಸ್ ಇಲಾಖೆಯ ನೌಕರರ ವೇತನ ಈಗಾಗಲೇ ಹೆಚ್ಚಿಸಿದಂತೆ ಇವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 4 ನಿಗಮಗಳಿದ್ದು, ಸುಮಾರು 26 ಸಾವಿರ ಬಸ್‌ಗಳನ್ನು ಹೊಂದಿರುವ ಸಂಸ್ಥೆಯಲ್ಲಿ ಸುಮಾರು ಲಕ್ಷಕ್ಕೂ ಅಧಿಕ ನೌಕರರು ತಮ್ಮ ಸೇವೆ ಸಲ್ಲಿಸುತ್ತಿರುವುದು ದೇಶದಲ್ಲಿಯೇ ಸಾರಿಗೆ ಸಂಸ್ಥೆಯಲ್ಲಿಯೇ ಕರ್ನಾಟಕ ಸಾರಿಗೆ ಸಂಸ್ಥೆ ಉನ್ನತ ಸ್ಥಾನದಲ್ಲಿದೆ. ಇದಕ್ಕೆ ಕಾರಣವಾದ ನೌಕರರ ಹಿತರಕ್ಷಣೆಗೆ ಮುಂದಾಗದಿರುವ ಕಾಂಗ್ರೆಸ್ ಸರ್ಕಾರದ ನಡೆಗೆ ಮುಂದಿನ ದಿನಗಳಲ್ಲಿ ನೌಕರರು ಹಾಗೂ ಪ್ರಯಾಣಿಕರು ತಕ್ಕ ಉತ್ತರ ಕೊಡಲಿದ್ದಾರೆ ಎಂದು ಗುಡುಗಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 