ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
Make the survey of social and educational conditions a success: District Collector Mohammed Roshan
ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಬೆಳಗಾವಿ 02: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೈಗೊಳ್ಳಲಾಗುವ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷಾ ಕಾರ್ಯವನ್ನು ಕಾಲಮಿತಿಯೊಳಗೆ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಜರುಗಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ(ಸೆ.2) ಜರುಗಿದ ರಾಜ್ಯ ಹಿಂದುಳಿದ ಆಯೋಗದ ವತಿಯಿಂದ ಕೈಗೊಳ್ಳಲಾಗುವ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷಾ ಕಾರ್ಯದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೆಸ್ಕಾಂ ಹಾಗೂ ಹುಕ್ಕೇರಿ ವಿದ್ಯುತ್ ಸರಬರಾಜು ಸಹಕಾರ ಸಂಘದ ವತಿಯಿಂದ ಮೀಟರ ರೀಡರಗಳ ಮೂಲಕ ಮನೆಗಳನ್ನು ಗುರುತಿಸಿ ಎಲ್ಲ ಮನೆಗಳಿಗೆ ಸ್ಟೀಕರ ಅಂಟಿಸುವ ಕಾರ್ಯವನ್ನು ತ್ವರಿತವಾಗಿ ಜರುಗಿಸಬೇಕು.
ವಿದ್ಯುತ್ ಸಂಪರ್ಕ ಇರದೆ ಇರುವಂತಹ ಗ್ರಾಮ, ಪ್ರದೇಶಗಳನ್ನು ಗುರುತಿಸುವದು ಮುಖ್ಯ ಕಾರ್ಯವಾಗಿದೆ. ಈ ಕಾರ್ಯದಲ್ಲಿ ಗ್ರಾಮ ಲೆಕ್ಕಿಗರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹೆಸ್ಕಾಂ ಸಿಬ್ಬಂದಿಗಳೊಂದಿಗೆ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವದರ ಮೂಲಕ ಎಲ್ಲ ಮನೆಗಳನ್ನು ಗುರುತಿಸುವ ಕಾರ್ಯವಾಗಬೇಕು. ಈ ಕಾರ್ಯವನ್ನು ಹತ್ತು ದಿನಗಳಲ್ಲಿ ಪೂರ್ಣಗೊಳಿಸಲು ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರ ಪ್ರದೇಶದಲ್ಲಿ ಯಾವುದೇ ಕುಟುಂಬಗಳು ಸಮಿಕ್ಷೆಯಿಂದ ಹೊರಗುಳಿಯದಂತೆ ಎಚ್ಚರ ವಹಿಸಬೇಕು. ನೆಟವರ್ಕ ಇಲ್ಲದೇ ಇರುವ ಪ್ರದೇಶದಲ್ಲಿ ವಿಶೇಷ ಅಭಿಯಾನದ ಮೂಲಕ ಮನೆಗಳನ್ನು ಗುರುತಿಸುವ ಕಾರ್ಯವಾಗಬೇಕು. ತದನಂತರ ತಹಶೀಲ್ದಾರ ಅವರ ನೇತೃತ್ವದಲ್ಲಿ ತಂಡಗಳನ್ನು ರಚಿಸಿಕೊಂಡು ಮತ್ತೋಮ್ಮೆ ಪರೀಶೀಲನೆ ಜರುಗಿಸಿ ವರದಿ ಸಲ್ಲಿಸಬೇಕು ಎಂದರು.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಅಗತ್ಯವಿರುವ ಸಿಬ್ಬಂದಿಗಳನ್ನುನಿಯೋಜಿಸಿ ಅವರಿಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲು ಕ್ರಮ ವಹಿಸಬೇಕು. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಯಾರೊಬ್ಬರು ಸಮೀಕ್ಷಾ ಕಾರ್ಯದಿಂದ ಹೊರಗುಳಿಯದಂತೆ ಹಾಗೂ ಲೋಪಗಳಿಗೆ ಆಸ್ಪದ ನೀಡದಂತೆ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಿವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ಮಾತನಾಡಿ, ಹೆಸ್ಕಾಂ ಮೀಟರ ಇಲ್ಲದೆ ಇರುವಂತಹ ಹಾಗೂ ತೋಟದ ಮನೆಗಳನ್ನು ಗುರುತಿಸಿ ಅಂತಹ ಮನೆಗಳ ಸಮೀಕ್ಷೆ ಜರುಗಿಸಬೇಕು. ಗ್ರಾಮಲೆಕ್ಕಿಗರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮಿಟರ್ ರೀಡರಗಳು ಸಮನ್ವಯ ಸಾಧಿಸಿ ಮನೆಗಳನ್ನು ಗುರುತಿಸಿ ಸ್ಟೀಕರ ಅಂಟಿಸಿರುವ ಕುರಿತು ಖಾತ್ರಿ ಪಡಿಸಿಕೊಳ್ಳಬೇಕು. ಸಮಿಕ್ಷಾ ಕಾರ್ಯದ ವರದಿಯನ್ನು ನಿಗದಿತ ತಂತ್ರಾಂಶದಲ್ಲಿ ನಿಯಮಿತವಾಗಿ ದಾಖಲಿಸಬೇಕು. ವಲಸೆ ಹೋದಂತಹ ಕುಟುಂಬಗಳ ಸಮೀಕ್ಷೆ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ಪಡೆಯಲು ತಿಳಿಸಿದರು.
ಸಭೆಯಲ್ಲಿ ಪ್ರೊಬೆಷನರಿ ಐ.ಎ.ಎಸ್. ಅಧಿಕಾರಿ ಅಭಿನವ ಜೈನ್, ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ ನಾಯಕ್, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವಿ ಬಂಗಾರ್ಪನವರ, ತಹಶೀಲ್ದಾರ ಬಸವರಾಜ ನಾಗರಾಳ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳಿ, ಹೆಸ್ಕಾಂ ಕಾರ್ಯಪಾಲಕ ಅಭಿಯಂತರ ಚಿಕ್ಕಾಡೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 