ಪೋಲಿಯೋ ಮುಕ್ತ ದೇಶ ನಿರ್ಮಾಣಕ್ಕೆ ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸಿ : ಶೇಖರ ಅಂಗಡಿ
Make vaccination of children mandatory to create a polio-free country: Shekhar Angadi
ಮಹಾಲಿಂಗಪುರ : ದೇಶವನ್ನು ಸಂಪೂರ್ಣವಾಗಿ ಪೋಲಿಯೋ ಮುಕ್ತವನ್ನಾಗಿಸಲು ಸಾರ್ವಜನಿಕರು ಐದು ವರ್ಷದೊಳಗಿನ ಮಕ್ಕಳಿಗೆ ಹತ್ತಿರದ ಪೋಲಿಯೋ ಲಸಿಕೆ ಬೂತ್‌ಗಳಿಗೆ ತೆರಳಿ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಮಾಜಿ ಪುರಸಭೆ ಅಧ್ಯಕ್ಷ ಶೇಖರ ಅಂಗಡಿ ಹೇಳಿದರು.3-4 ವರ್ಷಗಳಿಂದ ಪಲ್ಸ್ ಪೋಲಿಯೋ ಮುಕ್ತ ಭಾರತವಾಗಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ. ಪ್ರತಿ ಪೋಷಕರು ತಮ್ಮ ಮಗುವಿನ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅತ್ಯಗತ್ಯ. ಪಲ್ಸ್ ಪೋಲಿಯೊದಂತಹ ಮಹಾಮಾರಿಯಿಂದ ಮಗುವನ್ನು ರಕ್ಷಿಸುವುದು, ರೋಗ ಮುಕ್ತ ಸಮಾಜಕ್ಕೆ ದಾರಿಯಾಗುವುದು. ಪೋಲಿಯೋ ಹನಿ ಹಾಕುವ ಮೂಲಕ ಆರೋಗ್ಯವೇ ಭಾಗ್ಯ. ಭಯಾನಕವಾದ ಪೋಲಿಯೋ ರೋಗವನ್ನು ಹೊಡೆದೋಡಿಸಲು ಎಲ್ಲಾ ಸಂಘಟನೆಗಳ ಹಾಗೂ ಸರಕಾರದ ನಿರಂತರ ಪ್ರಯತ್ನದಿಂದ ಪೋಲಿಯೋ ಮುಕ್ತ ದೇಶವಾಗಿ ಹೊರ ಹೊಮ್ಮುತ್ತಿರುವುದು ನಮಗೆ ಸಂತಸ ತಂದಿದೆ ಎಂದರು. ನಗರದ ಪುರಸಭೆ ಆವರಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ರವಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ನಂತರ ಪುರಸಭೆ ಮುಖ್ಯಾಧಿಕಾರಿ ನಾಮದೇವ ಲಮಾಣಿ ಮಾತನಾಡಿ 1995 ರಿಂದ ಆರಂಭವಾದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಇಷ್ಟು ಶೀಘ್ರ ಗತಿಯಲ್ಲಿ2014ರೊಳಗಾಗಿ ಜಾಗತಿಕ ಆರೋಗ್ಯ ಸಂಸ್ಥೆಯಿಂದ ಭಾರತ ಪೋಲಿಯೋ ಮುಕ್ತ ಎಂಬ ಹೆಗ್ಗಳಕೆಗೆ ಪಾತ್ರವಾಗಿದೆ. ಇದೊಂದು ಜಾಗತಿಕ ಮಟ್ಟದಲ್ಲಿ ಗುರುತಿಸುವಂತಹ ಕಾರ್ಯದಲ್ಲಿ ಯಶಸ್ವಿಯಾಗಲು ಆರೋಗ್ಯ ಇಲಾಖೆ, ರೋಟರಿ ಸಂಸ್ಥೆ, ಸರ್ಕಾರದ ವಿವಿಧ ಇಲಾಖೆಗಳು, ರಾಜಕೀಯ ಇಚ್ಚಾಶಕ್ತಿ ಮತ್ತು ಧಾರ್ಮಿಕ ಮುಖಂಡರ, ಸಾಮಾಜಿಕ ಸೇವಾ ಸಂಸ್ಥೆಗಳ ಪಾತ್ರ ಬಹುಮುಖ್ಯವಾದುದು ಇವರೆಲ್ಲರ ಶ್ರಮದಿಂದ ಇಂದು ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿದೆ. ಅಲ್ಲದೇ ರಾಷ್ಟ್ರೀಯ ಲಸಿಕಾ ವೇಳಾ ಪಟ್ಟಿಯಂತೆ ಹುಟ್ಟಿದ ಎಲ್ಲಾ ಮಕ್ಕಳಿಗೂ ಎಂಟು ಮಾರಕ ರೋಗಗಳ ವಿರುದ್ಧ ಕೊಡುವ ಸಕಲ ಲಸಿಕೆಗಳನ್ನು ಸಮಯಕ್ಕೆ ಸರಿಯಾಗಿ ಹಾಕಿಸಿ ಮಕ್ಕಳನ್ನು ಎಂಟು ಮಾರಕ ರೋಗಗಳಿಂದ ರಕ್ಷಿಸಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಮುಖಂಡರಾದ ಲಕ್ಷ್ಮಣ ಮಾಂಗ, ಪುರಸಭೆ ಹಿರಿಯ ಆರೋಗ್ಯ ನೀರೀಕ್ಷಕ ಎಂ ಎಂ ಮುಗಳಖೋಡ, ರವಿ ಹಲಸಪ್ಪಗೊಳ, ಮನೋಜ ಹಂಚಾಟಿ, ವೀರೇಶ ಜಿಗೇರಿ,ಲಕ್ಕಣ ದೊಡಮನಿ, ಕಾಂತು ಹಡಪದ, ಅಂಗನವಾಡಿ ಕಾರ್ಯಕರ್ತೆಯರಾದ ಗೀತಾ ಡೋಣಿ, ಮಹಾನಂದ ಹುರಕಡ್ಲಿ, ಲಕ್ಷ್ಮಿ ಡೋಣಿ, ಸೇರಿದಂತೆ ಇತರರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 