ಕಟ್ಟಡ ಕಾಮಗಾರಿ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಮಾನೆ ಸೂಚನೆ
Mane instructed to complete the construction work within the stipulated time frame
ಕಟ್ಟಡ ಕಾಮಗಾರಿ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಮಾನೆ ಸೂಚನೆ
ಹಾನಗಲ್ 14: ತಾಲೂಕಿನಲ್ಲಿ ಕರ್ನಾಟಕ ಗೃಹ ಮಂಡಳಿಯಿಂದ ಕೈಗೊಂಡಿರುವ ನಾನಾ ಕಟ್ಟಡ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಮಂಡಳಿಯ ಸಹಾಯಕ ಕಾರ್ಯ ನಿರ್ವಾಹಕ ಇಂಜನೀಯರ್ ಹುಸೇನಬಿ ಅವರಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು.
ಇಲ್ಲಿನ ಕರ್ನಾಟಕ ಗೃಹ ಮಂಡಳಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಕಾಮಗಾರಿ ಪ್ರಗತಿ ಹಾಗೂ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡುವ ಮೂಲಕ ನಿಗಾ ವಹಿಸಬೇಕು. ಹೊಸದಾಗಿ ಮಂಜೂರಿಯಾಗಿರುವ ಕಾಮಗಾರಿಗಳನ್ನು ಬೇಗ ಕೈಗೆತ್ತಿಕೊಳ್ಳುವಂತೆ ಸೂಚನೆ ನೀಡಿದರು.ಸ್ಥಳ ಗುರುತಿಸಲು ಸಮಸ್ಯೆ ಇರುವಂಥ ನಿವೇಶನಗಳನ್ನು ಆದಷ್ಟು ಬೇಗ ಅಳತೆ ಮಾಡಿಕೊಂಡು ಕಾಮಗಾರಿ ಆರಂಭಿಸಬೇಕು. ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ಸಲ್ಲದು. ಈಗಾಗಲೇ ಕಾಮಗಾರಿ ಪ್ರಗತಿಯಲ್ಲಿರುವ ಹಾನಗಲ್ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಮೊದಲ ಮಹಡಿ ನಿರ್ಮಾಣದ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸಿ ಶೈಕ್ಷಣಿಕ ಚಟುವಟಿಕೆಗಳಿಗೆ ದೊರಕಿಸುವಂತೆ ಶಾಸಕ ಮಾನೆ ಸೂಚಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 