ಕರ್ನಾಟಕ ತಂಡಕ್ಕೆ ಮಣಿಕಂಠ ಕಡಕೋಳ ಆಯ್ಕೆ
Manikantha Kadakola selected for Karnataka team
ದೇವರಹಿಪ್ಪರಗಿ 15: ಪಟ್ಟಣದ ಸಮೀಪವಿರುವ ನಮ್ಮೂರ ಧಾಮ ಶಾಲೆಯ ವಿದ್ಯಾರ್ಥಿ ಮಣಿಕಂಠ ಕಡಕೋಳ 19 ವರ್ಷದೊಳಗಿನ ಟಿ.20 ಕ್ರಿಕೆಟ್ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾನೆ. ಗುಜರಾತ ಕ್ರಿಕೆಟ್ ಮಂಡಳಿ ಹಾಗೂ ಡಿಸಿಸಿಎನ್ ನವಸಾರಿ ಆಯೋಜಿಸುತ್ತಿರುವ ಸರ್ದಾರ್ ವಲ್ಲಭಾಯಿ ಪಟೇಲ ಅಖಿಲ ಭಾರತ ಅಂತರರಾಜ್ಯ 19 ವರ್ಷದೊಳಗಿನ ಟಿ-20 ಕ್ರಿಕೆಟ್ ಚಾಂಪಿಯನ್ ಶಿಪ್ 2025ರ ರಾಜ್ಯ ತಂಡಕ್ಕೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿಯಿಂದ ನಮ್ಮ ಮಕ್ಕಳ ಧಾಮ ಶಾಲೆಯ ವಿದ್ಯಾರ್ಥಿ ಮಣಿಕಂಠ ಕಡಕೋಳ ಆಯ್ಕೆಯಾಗುವ ಮೂಲಕ ತಾಲೂಕಿನ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ಮಕ್ಕಳ ಪರ ಚಿಂತಕರು ಹಾಗೂ ಉಜ್ವಲ ಸಂಸ್ಥೆಯ ಮಾಜಿ ನಿರ್ದೇಶಕ ವಾಸುದೇವ ತೋಳಬಂದಿ, ಉಜ್ವಲ ಸಂಸ್ಥೆ ನಿರ್ದೇಶಕಿ ಸುನಂದಾ ತೋಳಬಂದಿ, ಧಾಮದ ಮುಖ್ಯ ಶಿಕ್ಷಕರಾಗಿದ್ದ ರಾವುತ ಮರಬಿ ತರಬೇತುದಾರಶ್ರೀಕಾಂತ ಕಾಖಂಡಕಿ ಸೇರಿದಂತೆ ವಿವಿಧ ಸಂಘಟನೆಗಳು ಅಭಿನಂದಿಸಿ, ಹರ್ಷ ವ್ಯಕ್ತಪಡಿಸಿದ್ದಾರೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 