ಬಜೆಟ್ನಲ್ಲಿ ಬೆಳಗಾವಿ ಹಾಗೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹಲವು ಮಹತ್ವದ ಘೋಷಣೆ
Many important announcements for the development of Belgaum and North Karnataka in the budget
ಬೆಳಗಾವಿ 06 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27 ನೇ ಸಾಲಿನ ಕರ್ನಾಟಕ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಬೆಳಗಾವಿ ಹಾಗೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಈ ಬಜೆಟ್ನಲ್ಲಿ ಜನಹಿತ ಮತ್ತು ಅಭಿವೃದ್ಧಿಗೆ ಉತ್ತೇಜನ ನೀಡುವ ಹಲವು ಯೋಜನೆಗಳ ಬಜೆಟ್ ಇದು. ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನದ ಬಂದೋಬಸ್ತ್ ಕಾರ್ಯದಲ್ಲಿ ನಿಯೋಜನೆಯಾಗುವ 1,000 ಸಿಬ್ಬಂದಿಗೆ ?20 ಕೋಟಿ ವೆಚ್ಚದಲ್ಲಿ ಶಾಶ್ವತ ಬ್ಯಾರಕ್ಗಳ ನಿರ್ಮಾಣ. ಅಥಣಿಯಲ್ಲಿ ಹೊಸ ಕೃಷಿ ಮಹಾವಿದ್ಯಾಲಯ ಸ್ಥಾಪನೆ.
ಬೆಳಗಾವಿಯ ಪಶುವೈದ್ಯಕೀಯ ಕಾಲೇಜುಗಳಲ್ಲಿ ಸಿಟಿ ಸ್ಕ್ಯಾನಿಂಗ್ ಯಂತ್ರಗಳ ಸ್ಥಾಪನೆ.16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಗೆ ನಿಬಂರ್ಧ.ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಮರುಪ್ರಾರಂಭ.ತುರ್ತು ವೈದ್ಯಕೀಯ ಸೇವೆಯನ್ನು ಬಲಪಡಿಸಲು ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಟ್ರಾಮಾ ಕೇರ್ ಕೇಂದ್ರಗಳ ಸ್ಥಾಪನೆ.ಬೆಳಗಾವಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗದಲ್ಲಿರುವ ಮಹಿಳೆಯರಿಗೆ ವಸತಿ ನಿಲಯಗಳ ನಿರ್ಮಾಣ.ಬೆಳಗಾವಿ ಜಿಲ್ಲೆಯ ಬೆಳಗುಂದಿಯಲ್ಲಿ ಕುಸ್ತಿ ಅಖಾಡ ನಿರ್ಮಾಣ.ಬೆಳಗಾವಿ ಗ್ರಾಮೀಣ ಭಾಗದಲ್ಲಿ ಹೊಸ ಪ್ರಥಮ ದರ್ಜೆ ಕಾಲೇಜು ಆರಂಭ.ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ 1,000 ಏಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿ.
ಬೆಳಗಾವಿ ಜಿಲ್ಲೆಯ ಯರಗಟ್ಟಿಯಲ್ಲಿ ಹೊಸ ಪೊಲೀಸ್ ಠಾಣೆ ಸ್ಥಾಪನೆ. ಬೈಲಹೊಂಗಲದಲ್ಲಿ ಪ್ರಜಾಸೌಧ ನಿರ್ಮಾಣ.ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಕುರಿ/ಮೇಕೆ ಹಾಗೂ ಹಸು/ಎಮ್ಮೆ ಖರೀದಿಗೆ 10,000 ಫಲಾನುಭವಿಗಳಿಗೆ ತಲಾ 25ಅ ಸಬ್ಸಿಡಿ. ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ "ಮಕ್ಷ್ಯ ದರ್ಶಿನಿ' ಕೇಂದ್ರಗಳ ಸ್ಥಾಪನೆ.ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಬೆಳಗಾವಿ ಮತ್ತು ಕಲಬುರಗಿಯಲ್ಲಿ ಎಸ್ ಸಿ/ಎಸ್ಟಿ ಉದ್ಯೋಗಿನಿಯರಿಗಾಗಿ 10 ಕಾರ್ಯನಿರತ ಮಹಿಳಾ ವಸತಿ ನಿಲಯಗಳ ಆರಂಭ.ಬೀ. ಆರ್. ಅಂಬೇಡ್ಕರ್ ಅವರು ಭೇಟಿ ನೀಡಿದ ಕಲಬುರಗಿ, ವಿಜಯಪುರ, ಬೆಳಗಾವಿ ಮತ್ತು ಕೋಲಾರ ಜಿಲ್ಲೆಗಳಲ್ಲಿ ಅವರ ಹೆಸರಿನಲ್ಲಿ ಅಃಖಇ ಪಠ್ಯಕ್ರಮದ 4 ಏಖಇಋ ವಸತಿ ಶಾಲೆಗಳ ಆರಂಭ.
ಬೆಂಗಳೂರು, ಮೈಸೂರು, ಮಂಗಳೂರು, ಧಾರವಾಡ, ಬೆಳಗಾವಿ, ಕಲಬುರಗಿ, ದಾವಣಗೆರೆ, ಶಿವಮೊಗ್ಗ ಮತ್ತು ಬಳ್ಳಾರಿಯಲ್ಲಿ 150 ಸಾಮರ್ಥ್ಯದ 50 ಹೊಸ ಪೋಸ್ಟ್-ಮ್ಯಾಟ್ರಿಕ್ ವಿದ್ಯಾರ್ಥಿ ವಸತಿ ನಿಲಯಗಳ ಆರಂಭ.ಜಿಲ್ಲೆಯಲ್ಲಿ ವೀರ ರಾಣಿ ಬೆಳವಾಡಿ ಮಲ್ಲಮ್ಮ ಅವರ ಹೆಸರಿನಲ್ಲಿ ಪ್ರತ್ಯೇಕ ಪ್ರತಿಷ್ಠಾನಗಳ ಸ್ಥಾಪನೆ."ಸಶಕ್ತ ಕರ್ನಾಟಕ" ಯೋಜನೆಯಡಿ ಬೆಳಗಾವಿ, ಗೋಕಾರ್ಣ, ಚಿತ್ರದುರ್ಗ ಮತ್ತು ಹಂಪಿಯಲ್ಲಿ ರಾಷ್ಟ್ರೀಯ ಮಟ್ಟದ ಮ್ಯಾರಥಾನ್ ಹಾಗೂ 10 ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಮ್ಯಾರಥಾನ್ಗಳ ಆಯೋಜನೆ. ಜನಪರ ಹಾಗೂ ಗ್ಯಾರಂಟಿ ಬಜೆಟ್ ಮಂಡನೆ ಮಾಡಿದ್ದಾರೆ.ವಿಶ್ವಾಸ ವೈದ್ಯ, ಶಾಸಕರು ಸವದತ್ತಿ ಯಲ್ಲಮ್ಮ ವಿಧಾನ ಸಭಾ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 