ಮದುವೆ ಪ್ರತಿಯೊಬ್ಬರ ಜೀವನದ ಮಹತ್ತರ ಘಟ್ಟ : ಹೆಬ್ಬಾಳದ ಮಹಾಂತರುದ್ರ ಶ್ರೀಗಳು
Marriage is a great moment in everyone's life: Mahatarudra Sri of Hebbal
ಶಿಗ್ಗಾವಿ 12 : ಮದುವೆ ಪ್ರತಿಯೊಬ್ಬರ ಜೀವನದ ಮಹತ್ತರ ಘಟ್ಟ. ಇದಕ್ಕಾಗಿ ಅನಗತ್ಯ ಹಣ ವ್ಯರ್ಥ ಮಾಡುವ ಅಗತ್ಯವಿಲ್ಲ ಹೆಬ್ಬಾಳದ ಮಹಾಂತರುದ್ರ ಶ್ರೀಗಳು ಹೇಳಿದರು. ಪಟ್ಟಣದ ವಿರಕ್ತಮಠದಲ್ಲಿ ಹಮ್ಮಿಕೊಂಡಿದ್ದ ಉಚಿತ ಸರ್ವ ಧರ್ಮ ಸಾಮೂಹಿಕ ವಿವಾಹ 7 ಜೋಡಿಗಳ ಕಾರ್ಯಕ್ರಮದಲ್ಲಿ ದಂಪತಿಗಳಿಗೆ ಆರ್ಶಿವದಿಸಿ ಮಾತನಾಡಿದ ಅವರು ಸಾಮೂಹಿಕ ವಿವಾಹದಲ್ಲಿ ಸಂಸಾರ ಜೀವನಕ್ಕೆ ಪಾದಾರೆ್ಣ ಆದರ್ಶ. ಇದು ಕುಟುಂಬಕ್ಕೆ ಮಾತ್ರವಲ್ಲದೇ ದೇಶದ ಅಭಿವೃದ್ಧಿಗೂ ಸಹಕಾರಿ ಯಾಗುತ್ತದೆ ಎಂದರು. ರಟ್ಟಿಹಳ್ಳಿ ಕಬ್ಬಿಣಕಂತಿ ಮಠದ ಶಿವಲಿಂಗ ಶಿವಾಚಾರ್ಯ ಶ್ರೀಗಳು ಆಶೀರ್ವಚನ ನೀಡಿ ಮಾತನಾಡಿ, ಸಾಮೂಹಿಕ ವಿವಾಹದಂತಹ ಕಾರ್ಯಕ್ರಮಗಳಿಂದಾಗಿ ಬಡವರಿಗೆ ಅನುಕೂಲವಾಗಲಿದೆ. ಇಂತಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿವೆ.
ದುಂದುವೆಚ್ಚ. ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯವಾಗುತ್ತದೆ ಎಂದರು. ಗುತ್ತಲ ಪ್ರಭುಸ್ವಾಮಿಮಠದ ಗುರುಸಿದ್ದೇಶ್ವರ ಶ್ರೀಗಳು ಆಶೀರ್ವಚನ ನೀಡಿ ಮಾತನಾಡಿ, ಸಾಮೂಹಿಕ ವಿವಾಹ ಎಂದರೆ ಅದು ಕೇವಲ ಬಡ ಜನರ ಮದುವೆ ಕಾರ್ಯಕ್ರಮ ಎಂದು ಭಾವಿಸುವುದು ತಪ್ಪು. ಪವಿತ್ರವಾದ ಧಾರ್ಮಿಕ ಕ್ಷೆ?ತ್ರ, ಸಹಸ್ರಾರು ಭಕ್ತರ ಮತ್ತು ಮಠಾಧೀಶರ ಆಶಿರ್ವಾದದೊಂದಿಗೆ ಸಾಮೂಹಿಕ ವಿವಾಹ ಬಂಧನಕ್ಕೊಳಗಾಗುವ ಭಾಗ್ಯ ಜೀವನದ ಸಾರ್ಥಕತೆಯ ಕ್ಷಣವಾಗಿದೆ ಎಂದರು.ಲಿಂ. ಸಂಗನಬಸವ ಮಹಾಸ್ವಾಮಿಗಳವರ ಹಾಗೂ ಲಿಂ. ಶ್ರೀ ಬಸವಲಿಂಗ ಮಹಾಸ್ವಾಮಿಗಳವರ ಭಾವಚಿತ್ರದ ಭವ್ಯ ಮೆರವಣಿಗೆಯು ಶಿಗ್ಗಾವಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಹತ್ತಿಮತ್ತೂರು ವಿರಕ್ತಮಠದ ನಿಜಗುಣ ಮಹಾಸ್ವಾಮಿಗಳು, ಹೊಳೆಇಟಗಿ ವಿರಕ್ತಮಠದ ಮಡಿವಾಳ ಮಹಾಸ್ವಾಮಿಗಳು, ಲಿಂಗನಾಯಕನಹಳ್ಳಿಯ ಚೆನ್ನವೀರ ಮಹಾಸ್ವಾಮಿಗಳು, ಅಗಡಿ ಅಕ್ಕಿ ಮಠದ ಡಾ. ಗುರುಲಿಂಗ ಮಹಾಸ್ವಾಮಿಗಳು, ಬಂಕಾಪುರ ಅರಳಿಲೆ ಹಿರೇಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶಿಗ್ಗಾವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು, ವಿರಕ್ತಮಠದ ಬಸವಲಂಗ ದೇವರು ಸೇರಿದಂತೆ, ತಾಲೂಕಾ ಶರಣ ಸಾಹಿತ್ಯ ಪರಿಷತ್ ಅದ್ಯಕ್ಷ ಸಿ ಡಿ ಯತ್ನಳ್ಳಿ, ಮುಖಂಡರಾದ ಶಿವಾನಂದ ಮ್ಯಾಗೇರಿ, ಡಾ. ಮಲ್ಲೇಶಪ್ಪ ಹರಿಜನ, ಫಕ್ಕೀರೇಶ ಮಾಸ್ತರ್ ಕೊಂಡಾಯಿ ಹಾಗೂ ಮಠದ ಭಕ್ತರು ಸೇರಿದಂತೆ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 