ಭಾವೈಕ್ಯತೆಯಿಂದ ದೀಪ ಬೆಳಗಿದ ಹಿಂದೂ-ಮುಸ್ಲಿಂ ಸಂಭ್ರಮ ಮಾರುತೇಶ್ವರ ಕಾರ್ತಿಕೋತ್ಸವ
Maruteshwara Kartikotsava, a Hindu-Muslim celebration lit with lamps in unity
ನರೇಗಲ್ 30: ಪಟ್ಟಣದ 3ನೇ ವಾರ್ಡ್‌ನಜಕ್ಕಲಿ ರೋಡ್‌ಆಶ್ರಯಕಾಲೋನಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮಾರುತೇಶ್ವರದೇವಸ್ಥಾನದಕಾರ್ತಿಕೋತ್ಸವವನ್ನು ಹಿಂದೂ-ಮುಸ್ಲಿಂ ಸಮುದಾಯದಜನರು ಸಂಭ್ರಮದಿಂದ ಶನಿವಾರ ನೆರವೇರಿಸಿದರು. ಎಲ್ಲರೂ ಸಾಂಘಿಕವಾಗಿ ಬೆಳಿಗ್ಗೆಯಿಂದ ದೇವಸ್ಥಾನದ ಸ್ವಚ್ಚತೆ, ಲೈಟಿಂಗ್ ವ್ಯವಸ್ಥೆ,ಎಲೆಚಟ್ಟು ಸಿದ್ದತೆ, ಅಡುಗೆ ಹಾಗೂ ಅಲಂಕಾರವನ್ನು ಮಾಡಿದರು.
ಸಂಜೆ ವೇಳೆ 8 ಗಂಟೆಗೆಆರಂಭವಾದಕಾರ್ತಿಕೋತ್ಸವದಲ್ಲಿ ಪಾಲ್ಗೊಂಡಅಪಾರ ಸಂಖ್ಯೆಯ ಮಹಿಳೆಯರು, ಯುವಕರು, ಹಿರಿಯರು ವಿಶೇಷ ಪೂಜೆಕಾರ್ಯವನ್ನುಕೈಗೊಂಡರು. ಮಂಗಳಾರತಿ ಹಾಡುವ ಮೂಲಕ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಗುಡಿಯಲು ಸುತ್ತಲು ದೀಪ ಹಚ್ಚಿ ಭಾವೈಕ್ಯತೆಯ ಸಂದೇಶ ಸಾರಿದರು.
ಈ ವೇಳೆ ಮಾತನಾಡಿದದೇವಸ್ಥಾನಟ್ರಸ್ಟ್‌ಕಮೀಟಿಅಧ್ಯಕ್ಷದಾದಾಸಾಬ್ ನದಾಫ್, ಪ್ರತಿ ವ್ಯಕ್ತಿಯಲ್ಲೂ ವಿಶೇಷತೆಅಡಗಿರುತ್ತದೆ. ಜ್ಞಾನದ ಮಹತ್ವಅರಿತು ಸದ್ಗುಣ, ಸಜ್ಜನಿಕೆಯಿಂದ ಬಾಳಿ, ಬದುಕಿದಾಗ ಆ ಬದುಕಿಗೆಅರ್ಥ ಸಿಗುತ್ತದೆ. ಅನಾದಿ ಕಾಲದಿಂದಆಚರಣೆಯಲ್ಲಿರುವ ದೀಪ ಬೆಳಗಿಸುವ ಕಾರ್ತಿಕೋತ್ಸವ ಹಬ್ಬ ಬರೀಆಚರಣೆಯಲ್ಲ. ನಮ್ಮ ಬದುಕಿನಲ್ಲಿಅಡಗಿರುವಕತ್ತಲೆಯನ್ನು ಹೊಡೆದೋಡಿಸಿ, ಜ್ಞಾನದ ಬೆಳಕನ್ನು ಬೆಳಗುವ ಸಂಕೇತ ಈ ಆಚರಣೆಯಲ್ಲಿಅಡಗಿದೆ. ಅದನ್ನು ಪ್ರತಿ ವರ್ಷಒಗ್ಗಟ್ಟಾಗಿಆಚರಣೆ ಮಾಡುತ್ತೇವೆಎಂದರು.
ಯುವ ಮುಖಂಡ ಸದ್ದಾಂ ನಶೇಖಾನ್ ಮಾತನಾಡಿ, ಪ್ರತಿಯೊಂದುಧರ್ಮದಲ್ಲೂ ಪೂರ್ವಿಕರುಆಚರಣೆ ಮಾಡಿಕೊಂಡು ಬಂದ ಪ್ರತಿಯೊಂದು ಹಬ್ಬವು ವೈಜ್ಞಾನಿಕ ಸತ್ಯಗಳನ್ನು ಅಡಗಿದೆ. ಅದರಂತೆಎಣ್ಣೆಯ ದೀಪವನ್ನು ಹಚ್ಚುವುದರಿಂದ ಇಂಗಾಲ ಬಿಡುಗಡೆಯಾಗುವುದಿಲ್ಲ ಮತ್ತು ಪರಿಸರದಲ್ಲಿರುವ ರೋಗಾಣುಗಳು ನಾಶವಾಗುತ್ತವೆ. ಅಷ್ಟೇಅಲ್ಲದೆ ದೇವಸ್ಥಾನಗಳಲ್ಲಿ ಬೆಳಗುವ ದೀಪಗಳಿಂದ ಧನಾತ್ಮಕ ಚಿಂತೆಗಳು ಬರುತ್ತವೆಎಂದರು.
ಮುಖಂಡ ಶರಣಪ್ಪಕೊಂಡಿ ಮಾತನಾಡಿ, ಚಳಿಗಾಲದ ಅತೀಯಾದ ಚಳಿಯಿಂದ ಪ್ರಾಣಿ, ಪಕ್ಷಿಗಳಿಗೆ ಆರೋಗ್ಯದ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಅದನ್ನುತಡೆಯಲು ಹಿರಿಯರು ಪ್ರಕೃತಿದತ್ತವಾಗಿ ಸಿಗುವ ಎಣ್ಣೆಯ ಮೂಲಕ ಸಾಮೂಹಿಕ ದೀಪ ಹಚ್ಚಿತಾಪಮಾನದ ಸಮತೋಲನ ಕಾಪಾಡಲುಕಾರ್ತಿಕೋತ್ಸವಆಚರಣೆತಂದರುಎಂದರು.
ಕಾರ್ತಿಕೋತ್ಸವದ ನಂತರಅನ್ನ ಸಂತರೆ್ಣ ನೆರವೇರಿತು. ವಿರೂಪಾಕ್ಷಯ್ಯ ಹಿರೇಮಠ, ಚನ್ನವೀರಯ್ಯ ಹಿರೇಮಠ, ನಿಂಗಯ್ಯ ಸಿದ್ದನಗೌಡ್ರ, ಶರಣಪ್ಪ ಹಂಚಿನಾಳ, ವೀರೇಶ ಪಮ್ಮಾರ, ದೇವಪ್ಪ ಮಾಳೋತ್ತರ, ವೀರೇಶರಾಠೋಡ, ಪರಸಪ್ಪರಾಠೋಡ, ಹಸನ ಕೊಪ್ಪಳ, ಹನಂತಪ್ಪ ಜೋಡಗಂಬಳಿ, ಗುರು ಮಾಳೋತ್ತರ, ದುರಗಪ್ಪಕಟ್ಟಿಮನಿ, ರಾಚಯ್ಯ, ವೀರೇಶ ಹರ್ತಿ, ಮಹಿಳೆಯರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 