ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ
Massive protest demanding support price for sugarcane
ದೇವರಹಿಪ್ಪರಗಿ 07: ಸೂಕ್ತ ಬೆಲೆ ಸಿಗದೆ ಸಂಕಷ್ಟಕ್ಕೆ ಸಿಲುಕಿರುವ ಕಬ್ಬು ಬೆಳೆಗಾರರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಒತ್ತಾಯಿಸಿ ಉತ್ತರ ಕರ್ನಾಟಕ ರಾಜ್ಯ ರೈತ ಸಂಘ, ರೈತ ಪರ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಪಟ್ಟಣದ ಮೊಹರೆ ವೃತ್ತದ ಬಳಿ ಶುಕ್ರವಾರ ಜಮಾಯಿಸಿದ ನೂರಾರು ರೈತರಿಂದ ಕೈಯಲ್ಲಿ ಕಬ್ಬು ಹಿಡಿದು ಬಸ್ ನಿಲ್ದಾಣದ ಮಾರ್ಗವಾಗಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರ ಟನ್ ಕಬ್ಬಿಗೆ ರೂ. 3,500 ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ತಹಸಿಲ್ದಾರ್ ಪ್ರಕಾಶ ಸಿಂದಗಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಉತ್ತರ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಶಂಕರಗೌಡ ಹಿರೇಗೌಡರ ಅವರು ಮಾತನಾಡಿ, ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಗುರ್ಲಾಪುರದಲ್ಲಿ ಸಾವಿರಾರು ರೈತರು ವಾರದಿಂದ ರಸ್ತೆಯಲ್ಲಿ ಕುಳಿತು ಅಹೋರಾತ್ರಿ ಧರಣಿ, ಹೋರಾಟ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ರೈತರ ಜತೆ ಮಾತುಕತೆ ನಡೆಸದೆ ನಾಟಕವಾಡುತ್ತಿದೆ. ಸಕ್ಕರೆ ಕಾರ್ಖಾನೆಗಳ ಮಾಲೀಕರ ಒತ್ತಡಕ್ಕೆ ಮಣಿದು ಕಬ್ಬು ಖರೀದಿ ಬೆಲೆಯನ್ನು ಹೆಚ್ಚಳ ಮಾಡುತ್ತಿಲ್ಲ ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಕ್ಕರೆ ಬೆಲೆ ಮರು ಪರೀಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.ಕೆ.ಆರ್.ಎಸ್ ಪಕ್ಷದ ರಾಜ್ಯ ಮುಖಂಡರಾದ ಶಿವಾನಂದ ಯಡಹಳ್ಳಿ ಅವರು ಮಾತನಾಡಿ, ರಾಜ್ಯದ ಹಲವು ಕಾರ್ಖಾನೆಗಳು ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಮಾಲೀಕತ್ವದಲ್ಲಿ ನಡೆಯುತ್ತಿವೆ. ಹಾಗಾಗಿ ಯಾವ ರಾಜಕೀಯ ಪಕ್ಷದವರು ಅಧಿಕಾರಕ್ಕೆ ಬಂದರೂ ಕಬ್ಬು ದರ ಹೆಚ್ಚಳಕ್ಕೆ ಮುಂದಾಗುವುದಿಲ್ಲ. ಇಂತಹ ಸರ್ಕಾರಗಳಿಗೆ ರಾಜಕಾರಣಿಗಳ ಹಿತ ಕಾಯುವುದೇ ಮುಖ್ಯವಾಗಿರುತ್ತದೆ, ಹೊರತು ರೈತರ ದಲ್ಲ ರೈತರ ಕೂಗಿಗೆ ಬೆಲೆ ಕೊಟ್ಟು, ಆದಷ್ಟು ಬೇಗ ಸರಕಾರ ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಹೇಳಿದರು.
ರೈತ ಮುಖಂಡರುಗಳಾದ ಪೀರು ಕೇರೂರ,ಅಜೀಜ ಯಲಿಗಾರ, ರೇಣುಕಾ ಪಾಟೀಲ ಸೇರಿದಂತೆ ಹಲವಾರು ಮುಖಂಡರು ಮಾತನಾಡಿ,‘ಟನ್ ಕಬ್ಬಿಗೆ ರೂ. 3,500 ದರ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ನಿರ್ಲಕ್ಷ್ಯ ಮಾಡುತ್ತಲೇ ಬಂದಿದೆ. ಪಕ್ಕದ ಮಹಾರಾಷ್ಟ್ರ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳ ಸಕ್ಕರೆ ಕಾರ್ಖಾನೆಗಳು ಟನ್ ಕಬ್ಬಿಗೆ ರೂ. 3,400ಹಿ 3,500 ಬೆಲೆ ನೀಡುತ್ತಿವೆ. ಆದರೆ ರಾಜ್ಯದಲ್ಲಿ ರೂ. 3,100 ಕೊಡಲಾಗುತ್ತಿದೆ. ಬೆಲೆ ಹೆಚ್ಚಿಸಲು ಸರ್ಕಾರ ಮನಸ್ಸು ಮಾಡುತ್ತಿಲ್ಲ’ ಎಂದು ದೂರಿದರು.
ಈ ಸಂದರ್ಭದಲ್ಲಿ ದುರ್ಗ ಮುರ್ಗವ್ವ ಸಂಘಟನೆಯ ಪದಾಧಿಕಾರಿಗಳು ಬಾರುಕೋಲಿನಿಂದ ಹೊಡೆದುಕೊಂಡು ರೈತರ ಆಕ್ರೋಶಕ್ಕೆ ಸಾತ್ ನೀಡಿದ್ದು ವಿಶೇಷವಾಗಿತ್ತು.ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಮುನೀರ್ ಅಹ್ಮದ್ ಮಳಖೇಡ,ಗುರುರಾಜ ಆಕಳವಾಡಿ,ಮಡುಗೌಡ ಬಿರಾದಾರ,ಚನ್ನಪ್ಪಗೌಡ ಬಿರಾದಾರ, ರಹೀಮಾನ್ ಕನಕಲ್, ಸುನಂದಾ ಸೊನ್ನಳ್ಳಿ, ಶಕೀಲಾ ಹೆಬ್ಬಾಳ ಸೇರಿದಂತೆ ಕರ್ನಾಟಕ, ಉತ್ತರ ರಾಜ್ಯ ರೈತ ಸಂಘ, ಹಸಿರು ಸೇನೆ, ಕೆ.ಆರ್.ಎಸ್. ದುರ್ಗ ಮುರ್ಗವ್ವ ಸಂಘಟನೆ, ಟ್ರ್ಯಕ್ಟರ್ ಗೆಳೆಯರ ಬಳಗ, ಕರ್ನಾಟಕ ರಕ್ಷಣಾ ವೇದಿಕೆ,ಜಯ ಕರ್ನಾಟಕ,ಮಹಿಳಾ, ದಲಿತ ಹಾಗೂ ಬಂಜಾರ ಸಂಘಟನೆಯ ಪದಾಧಿಕಾರಿಗಳು, ಮುಖಂಡರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 