ರಮೇಶ ಕತ್ತಿ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ
Massive protest demanding the arrest of Ramesh Katti
ರಮೇಶ ಕತ್ತಿ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ರಾಯಬಾಗ 21: ವಾಲ್ಮೀಕಿ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಮಂಗಳವಾರ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ತಹಶೀಲ್ದಾರ ಮಹಾದೇವ ಸನಮುರಿ ಅವರಿಗೆ ಮನವಿ ಸಲ್ಲಿಸಿದರು.
ಡಾ.ಬಿ.ಆರ್. ಅಂಬೇಡ್ಕರ ವೃತ್ತದಿಂದ ಝೇಂಡಾ ಕಟ್ಟೆವರೆಗೆ (ಅಭಾಜಿ ವೃತ್ತ) ಪ್ರತಿಭಟನೆ ರಾ್ಯಲಿ ನಡೆಸಿ, ರಮೇಶ ಕತ್ತಿ ವಿರುದ್ಧ ಘೋಷಣೆ ಕೂಗಿ, ರಮೇಶ ಕತ್ತಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ರಮೇಶ ಕತ್ತಿ ಅವರು ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯಾಗಿದ್ದರೂ, ತಮ್ಮ ಸ್ಥಾನದ ಅರಿವು ಇಲ್ಲದೆ ವಾಲ್ಮೀಕಿ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿದ್ದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿ.ಡಿ.ಸಿ.ಸಿ. ಬ್ಯಾಂಕ ಚುನಾವಣೆ ಪ್ರಕ್ರಿಯೆಯ ಸಮಯದಲ್ಲಿ ವಾಲ್ಮೀಕಿ ಸಮುದಾಯವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ವಾಲ್ಮೀಕಿ ಸಮುದಾಯವನ್ನು ಅವಮಾನಿಸಿರುತ್ತಾರೆ. ಇದರಿಂದ ದಲಿತ ಸಮುದಾಯದವರ ಭಾವನೆಗಳಿಗೆ ತೀವ್ರ ಧಕ್ಕೆ ಆಗಿದೆ. ದಲಿತ ವಿರೋಧಿ ಮನಸ್ಥಿತಿ ಹೊಂದಿರುವ ರಮೇಶ ಕತ್ತಿ ಇವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅಪ್ಪಾಸಾಹೇಬ ಕುಲಗುಡೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ವಕೀಲ ಆರ್.ಎಸ್. ಶಿರಗಾಂವೆ, ಹಾಜಿ ಮುಲ್ಲಾ, ಅರ್ಜುನ ನಾಯಿಕವಾಡಿ, ಅಬ್ದುಲ್ಲಸತ್ತಾರ ಮುಲ್ಲಾ, ಫಾರೂಕ್ ಮೊಮಿನ, ದೀಲಿಪ ಜಮಾದಾರ, ಬಾಹುಸಾಹೇಬ ಪಾಟೀಲ, ಜ್ಯೋತಿ ಕೆಂಪಟ್ಟಿ, ನಾಮದೇವ ಕಾಂಬಳೆ, ಅರ್ಜುನ ಬಂಡಗಾರ, ಅಜೀತ್ ನಾಗರಾಳೆ, ಮಾರುತಿ ಜಿರಾಳೆ, ಶ್ರವಣ ಕಾಂಬಳೆ ಸೇರಿದಂತೆ ಅನೇಕ ದಲಿತಪರ ಕಾರ್ಯಕರ್ತರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 