ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣಕ್ಕೆ ವಿರೋಧ ಅ. 6ರಿಂದ ಬೃಹತ್ ಪ್ರತಿಭಟನೆ

ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣಕ್ಕೆ ವಿರೋಧ ಅ. 6ರಿಂದ ಬೃಹತ್ ಪ್ರತಿಭಟನೆ Massive protest from 6th against unscientific internal reservation classification

ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣಕ್ಕೆ ವಿರೋಧ ಅ. 6ರಿಂದ ಬೃಹತ್ ಪ್ರತಿಭಟನೆ

ಗದಗ  05: ಪರಿಶಿಷ್ಟ ಜಾತಿಗಳಲ್ಲಿನ ಒಳಮೀಸಲಾತಿಯ ಅವೈಜ್ಞಾನಿಕ ವರ್ಗೀಕರಣವನ್ನು ವಿರೋಧಿಸಿ ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ಹಾಗೂ ಜಿಲ್ಲಾ ಬಂಜಾರ ಸಮುದಾಯದ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ಹೋರಾಟ ಆರಂಭವಾಗಲಿದೆ. ಸಮಿತಿಯ ಅಧ್ಯಕ್ಷ ರವಿಕಾಂತ ಅಂಗಡಿ ಶನಿವಾರ ನಗರದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಅಕ್ಟೋಬರ್ 6ರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಾಗೂ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭವಾಗಲಿದ್ದು, ನಾಯಕ, ಡಾವಸಾಣ, ಕಾರಭಾರಿ ಹಾಗೂ ಪಂಚರ ನೇತೃತ್ವದಲ್ಲಿ ಹೋರಾಟ ನಡೆಯಲಿದೆ ಎಂದು ಘೋಷಿಸಿದರು. ಅಕ್ಟೋಬರ್ 6ರಿಂದ 17ರ ವರೆಗೆ ಪ್ರತಿನಿತ್ಯ ಐದು ತಾಲೂಕುಗಳ ಐದು ಗ್ರಾಮಗಳ ಜನರು ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಲಿದ್ದಾರೆ. ಅಕ್ಟೋಬರ್ 17ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಬೇಡಿಕೆಗಳು ಈಡೇರದಿದ್ದರೆ, ಬಂಜಾರ ಸಮುದಾಯದವರ ಜೊತೆಗೆ ಮೀಸಲಾತಿಯಿಂದ ವಂಚಿತಗೊಂಡ ಇತರೆ ಸಮುದಾಯಗಳ ಸಹಭಾಗಿತ್ವದಲ್ಲಿ “ವಿಧಾನಸೌಧ ಚಲೋ” ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು. ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ ಅವರ ಏಕಸದಸ್ಯ ಆಯೋಗದ ವರದಿ ಸುಪ್ರೀಂ ಕೋರ್ಟ್ನ ಮಾನದಂಡಗಳನ್ನು ಉಲ್ಲಂಘಿಸಿದೆ ಎಂದು ಸಮಿತಿ ಆರೋಪಿಸಿದೆ. ಇದು ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ಮುಂದುವರಿದ ಭಾಗದಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಲಾಯಿತು.  

ಶಿಕ್ಷಣ, ಉದ್ಯೋಗ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಯ ಅಂಕಿಅಂಶಗಳು ವಾಸ್ತವಿಕತೆಗೆ ದೂರವಾಗಿವೆ. ಕೆಲವು ಕುಟುಂಬಗಳು ಅಲಭ್ಯತೆಯ ಕಾರಣಕ್ಕೆ ಸಮೀಕ್ಷೆ ಅಪೂರ್ಣವಾಗಿದೆ ಎಂದು ಆಯೋಗವೇ ಒಪ್ಪಿಕೊಂಡಿದ್ದರೂ, ಸರ್ಕಾರ ಈ ಅಪೂರ್ಣ ವರದಿಯನ್ನೇ ಜಾರಿಗೊಳಿಸಿರುವುದು ಗಂಭೀರ ತೊಂದರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಆಯೋಗ ಸಿದ್ಧಪಡಿಸಿದ ಕೋಷ್ಟಕದಲ್ಲಿ, “ಡಿ” ಗುಂಪಿನಲ್ಲಿರುವ ಲಂಬಾಣಿ ಮತ್ತು ಇತರೆ ಸಮುದಾಯವು 23 ಮಾನದಂಡಗಳಲ್ಲಿ ಕೇವಲ 6 ವಿಷಯಗಳಲ್ಲಿ ಮಾತ್ರ ತುಸು ಮುಂದಿದ್ದು, ಉಳಿದ 17 ವಿಷಯಗಳಲ್ಲಿ “ಸಿ” ಗುಂಪಿಗಿಂತ ತುಂಬಾ ಹಿಂದುಳಿದಿದೆ ಎಂಬುದನ್ನು ತೋರಿಸಲಾಗಿದೆ. ಹೀಗಿದ್ದರೂ, “ಡಿ” ಗುಂಪಿಗೆ “ಸಿ” ಗುಂಪಿಗಿಂತ ಕಡಿಮೆ ಶೇಕಡಾವಾರು ಮೀಸಲಾತಿ ನೀಡಿರುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧ ಎಂದು ಪ್ರಶ್ನಿಸಲಾಯಿತು. 2011ರ ಜನಗಣತಿಯ ಅಂಕಿಅಂಶಗಳನ್ನು 2025ರೊಂದಿಗೆ ಹೋಲಿಸಿದಾಗ, ಕೆಲ ಜಾತಿಗಳ ಜನಸಂಖ್ಯೆ ಕೇವಲ ಶೇ. 1.13ರಷ್ಟು ಹೆಚ್ಚಳ ತೋರಿಸಲಾಗಿದೆ. ಇನ್ನು ಕೆಲ ಜಾತಿಗಳಿಗೆ ಶೇ. 10ರಿಂದ 12ರಷ್ಟು ಹೆಚ್ಚಳ ತೋರಿಸಿರುವುದರ ಹಿಂದಿನ ಮರ್ಮವನ್ನು ನಾಗಮೋಹನದಾಸ ಅವರು ಬಹಿರಂಗಪಡಿಸಬೇಕಿದೆ ಎಂದು ಸಮಿತಿ ಆಗ್ರಹಿಸಿದೆ. ಆಯೋಗವು ಹಿಂದುಳಿದ ಸಮುದಾಯಗಳ ವರ್ಗೀಕರಣ ಮಾಡುವಾಗ ಸಂವಿಧಾನ ವಿರೋಧಿ ಪದಗಳನ್ನು ಬಳಸಿರುವುದು ವಿಷಾದನೀಯ.  

ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವತಃ ವಿಧಾನಸಭೆಯಲ್ಲಿ ಇದೇ ಪದಗಳನ್ನು ಬಳಸಿರುವುದು ಸಂವಿಧಾನಕ್ಕೆ ಅವಮಾನ ಎನಿಸುತ್ತದೆ ಎಂದು ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಪತ್ರಿಕಾ ಗೋಷ್ಠಿಯಲ್ಲಿ ಮುಖಂಡರಾದ ಟಿ.ಎಲ್‌. ನಾಯಕ, ಚಂದು ನಾಯಕ, ಶಿವಪ್ಪ ನಾಯಕ, ಕೇಶಪ್ಪ ಕಾರಭಾರಿ, ಕುಬೇರ​‍್ಪ ನಾಯಕ, ಖೀಮಪ್ಪ ನಾಯಕ, ತೇಜು ನಾಯಕ, ಶಿವಪತ್ರ ನಾಯಕ, ಭೋವಿ ವಡ್ಡರ ಸಂದಕದ, ಪರಮೇಶ ನಾಯಕ, ಸುರೇಶ ಪೂಜಾರ ಮುಂತಾದವರು ಹಾಜರಿದ್ದರು. ಫೋಟೋ ಲಗತ್ತಿಸಲಾಗಿದೆ. ಪ್ರಕಾರ ಕಟನೆಯ ಕೃಪೆಗಾಗಿ.... ರವಿಕಾಂತ ಅಂಗಡಿ, ವಕೀಲರು, ಅಧ್ಯಕ್ಷರು, ಬಂಜಾರಾ ಹೋರಾಟ ಸಮಿತಿ, ಗದಗ.