ವಿಜಯಪುರ ಜಿಲ್ಲೆಗೆ 371 ಜೆ ಮೀಸಲಾತಿ ಕಲ್ಪಿಸುವಂತೆ ಬೃಹತ್ ಹೋರಾಟ
Massive protest to provide 371J reservation to Vijayapura district
ವಿಜಯಪುರ ಜಿಲ್ಲೆಗೆ 371 ಜೆ ಮೀಸಲಾತಿ ಕಲ್ಪಿಸುವಂತೆ ಬೃಹತ್ ಹೋರಾಟ
ವಿಜಯಪುರ 29: ಜು. 31 ಬೆಳಿಗ್ಗೆ 10.00 ಗಂಟೆಗೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಸಂವಿಧಾನದ ಕಲಂ 371 ಜೆ ಅಡಿ ವಿಶೇಷ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಹೇಳಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು, ಸುಳ್ಳು ಭರವಸೆಗಳನ್ನು ನೀಡಿ ಜಿಲ್ಲೆಯ ಜನರ ಮುಗ್ದತೆಯನ್ನು ರಾಜಕೀಯವಾಗಿ ದುರುಪಯೋಗ ಮಾಡಿಕೊಳ್ಳುತ್ತಿರುವ ರಾಜಕೀಯ ಪಕ್ಷಗಳ ನಡೆಯನ್ನು ಖಂಡಿಸಿ ಜಿಲ್ಲೆಯ ಮಕ್ಕಳು ಹಾಗೂ ಯುವಕರಿಗೆ ನ್ಯಾಯ ದೊರಕಿಸಿಕೊಡಲು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಳೆದ 10 ವರ್ಷಗಳಿಂದ ಜಿಲ್ಲೆಗೆ ಸಾಕಷ್ಟು ಅನ್ಯಾಯವಾಗಿದೆ. 371 ಜೆ ವಿಶೇಷ ಸ್ಥಾನ ಮಾನ ಪಡೆಯಲು ಎಲ್ಲ ಅರ್ಹತೆ ಹೊಂದಿರುವ ವಿಜಯಪುರ ಜಿಲ್ಲೆಯನ್ನು ಕೈಬಿಟ್ಟಿದ್ದರಿಂದ ಜಿಲ್ಲೆಯು ಅಭಿವೃದ್ಧಿ ವಂಚಿತವಾಗಿದೆ. ಬಿಟ್ಟು ಹೋದ ಪ್ರದೇಶವಾದ ವಿಜಯಪುರ ಜಿಲ್ಲೆಗೆ ಮೀಸಲಾತಿ ಪಡೆಯಲು ಜಿಲ್ಲೆಯ ಜನರು, ಸಂಘ, ಸಂಸ್ಥೆಯವರು, ಪ್ರಜ್ಞಾಂತ ನಾಗರಿಕರು ನಮ್ಮ ಹೋರಾಟಕ್ಕೆ ಬೆಂಬಲಿಸಬೇಕು. ಮುಖ್ಯವಾಗಿ ಯುವ ಜನಾಂಗ ಹೋರಾಟದಲ್ಲಿ ಭಾಗವಹಿಸಿ ನಮ್ಮ ಪಾಲಿನ ಹಕ್ಕನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 