ಲೋಕದರ್ಶನ ವರದಿ
ವಿಜಯಪುರ 20:ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾಜರ್ುನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಯಂದಿರ ಪಾದಪೂಜೆ ಮತ್ತು ಮಕ್ಕಳಿಗೆ ಕೈತುತ್ತು ಉಣಿಸುವ ಮಾತೃಸಂಗಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಬಸವರಾಜ ಕರಜಗಿ ಕಾರ್ಯಕ್ರಮ ಉದ್ಘಾಟಿಸಿದರು. ಮಲ್ಲಿಕಾಜರ್ುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಮಾಜಿ ಸದಸ್ಯ ಎನ್.ಜಿ. ಮಸಳಿ, ಸಂತೋಷ ಎಸ್. ಬಂಡೆ, ಸುರೇಶಗೌಡ ಎನ್. ಬಿರಾದಾರ, ಎಂ.ಎಸ್. ಪಾಪನಾಳಮಠ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಕ್ರೀಡಾ ಸ್ಪಧರ್ೆ ಮತ್ತು ಸಾಂಸ್ಕೃತಿಕ ಸ್ಪಧರ್ೆಯಲ್ಲಿ ಭಾಗವಹಿಸಿ ವಿಜೇತರಾದ 44 ಮಕ್ಕಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ತಾಯಂದಿರಿಗೆ ಸಾಂಸ್ಕೃತಿಕ ಮತ್ತು ಮನರಂಜನಾ ಸ್ಪಧರ್ೆಗಳು ಏರ್ಪಡಿಸಲಾಗಿತ್ತು ಈ ಸ್ಪಧರ್ೆಯಲ್ಲಿ ವಿಜೇತರಾದ ತಾಯಂದಿರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.