ಮೌಲಾನಾ ಆಜಾದ್ ಶಾಲೆ ಕಟ್ಟಡ ಸ್ಥಳಾಂತರಿಸುವಂತೆ ಆಗ್ರಹಿಸಿ ಮನವಿ
Maulana Azad School petition demanding relocation of building
ಲೋಕದರ್ಶನ ವರದಿ
ಕಂಪ್ಲಿ 08: ಸಕ್ಕರೆ ಕಾರ್ಖಾನೆಯ ಸ.ಹಿ.ಪ್ರಾ ಶಾಲಾ ಆವರಣದಲ್ಲಿ ಮೌಲಾಮ ಅಬ್ದುಲ್ ಆಜಾದ್ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು, ಕೂಡಲೇ ಈ ಶಾಲೆಯನ್ನು ಬೇರೆಡೆ ಸ್ಥಳಾಂತರಿಸಬೇಕೆಂದು ಆಗ್ರಹಿಸಿ, ಕಂಪ್ಲಿಯ ಸಕ್ಕರೆ ಕಾರ್ಖಾನೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಾಮಲಿಂಗ ನೇತೃತ್ವದಲ್ಲಿ ಸದಸ್ಯರು, ಹಳೇ ವಿದ್ಯಾರ್ಥಿಗಳು, ಸಾರ್ವಜನಿಕರು ಕುರುಗೋಡು ಪಟ್ಟಣದಲ್ಲಿರುವ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಮ್ಯಾನೇಜರ್ ಬುಜಂಗಮಠ ಇವರಿಗೆ ಮನವಿ ಪತ್ರ ಸಲ್ಲಿಸಿದರು. ನಂತರ ಯುವ ಮುಖಂಡ ಎನ್.ಮನೋಜಗೌಡ ಮಾತನಾಡಿ, ಇಲ್ಲಿನ ಶಾಲೆಯು ಹಳೆಯದ್ದಾಗಿದ್ದು, ಅತಿ ಹೆಚ್ಚು ವಿದ್ಯಾರ್ಥಿಗಳು ಇಲ್ಲಿನ ಶಾಲೆಯಲ್ಲಿ ಶಿಕ್ಷಣ ಪಡೆದುಕೊಂಡಿದ್ದಾರೆ.
ಮತ್ತು ಈಗ ಸಾಕಷ್ಟು ವಿದ್ಯಾರ್ಥಿಗಳಿಗೆ ಅಕ್ಷರ ಜ್ಞಾನ ನೀಡಲಾಗುತ್ತಿದೆ. ಇಲ್ಲಿನ ಹೆಚ್ಚು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ಆಟದ ಮೈದಾನ ಹೊಂದಲಾಗಿದೆ. ಪಿಎಂಶ್ರೀ ಯೋಜನೆಗೆ ಒಳಪಟ್ಟಿದ್ದು, ಆತ್ಯಾಧುನಿಕ, ಮಾದರಿ ಶಾಲೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಆವರಣದಲ್ಲಿ ಮೌಲಾನಾ ಆಜಾದ್ ಶಾಲೆ ನಿರ್ಮಿಸಿದರೆ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಸುಂಕಣ್ಣ, ಪ್ರಕಾಶ, ಯರಿ್ರಸ್ವಾಮಿ, ಆದಿನಾರಾಯಣ, ಓಬಳೇಶ, ಕಾರ್ತಿಕ ಸೇರಿದಂತೆ ಹಳೇ ವಿದ್ಯಾರ್ಥಿಗಳು, ಎಸ್ಡಿಎಂಸಿಯವರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 