ವೀರೇಂದ್ರ ಹೆಗ್ಗಡೆ ಅವರ ಜನಪರ ಕಾರ್ಯಕ್ರಮಗಳು ಎಲ್ಲರಿಗೊ ಮಾದರಿಯಾಗಲಿ: ರಾಜು ನಾಯಕ
May Veerendra Heggade's pro-people programs be a model for everyone: Raju Nayak
ಹುಣಶ್ಯಾಳ, 25 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ ಮೂಡಲಗಿ ತಾಲೂಕಿನ ವತಿಯಿಂದ ಹುಣಶ್ಯಾಳ್ ಪಿಜಿ ಗ್ರಾಮದ ನಮ್ಮೂರು ಸರ್ಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಅಂಬಿಗರ ತೋಟ -2 ರಲ್ಲಿ ಒಂದರಿಂದ ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಲಸೆ ಕಾರ್ಮಿಕರ ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಒಟ್ಟು 48 ಮಕ್ಕಳಿಗೆ ಸ್ವೆಟರ್ಗಳನ್ನು ವಿತರಿಸಿ ಸಿಹಿ ಹಂಚಲಾಯಿತು.
ಮೂಡಲಗಿ ತಾಲೂಕಿನ ಯೋಜನಾಧಿಕಾರಿಗಳಾದ ರಾಜು ನಾಯಕ್ ಅವರು ಮಾತನಾಡಿ ಪೂಜ್ಯರ ಜನಪರ ಕಾರ್ಯಕ್ರಮಗಳ ವಿವರಿಸಿ ಪ್ರಯೋಜನ ಪಡೆದುಕೊಳ್ಳಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ (ರಿ.) ಅಥಣಿ ವೇದಿಕೆಯ ಸದಸ್ಯರಾದ ಉದಯ್ ಗೌಡ, ಶಾಲೆಯ ಮುಖ್ಯೋಪಾಧ್ಯಾಯರಾದ ನಾಗರಾಜ್ ಕಾಟವಿ, ಶಿಕ್ಷಕರಾದ ಹಣಮಂತ ಕಟ್ಟಿಮನಿ, ಜ್ಞಾನವಿಕಾಸ ಸಮನ್ವರಿ ಅಧಿಕಾರಿಯಾದ ವಿಜಯಲಕ್ಷ್ಮಿ, ವಲಯದ ಮೇಲ್ವಿಚಾರಕರಾದ ಮಂಜುಳಾ, ಸೇವಾ ಪ್ರತಿನಿಧಿಗಳು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕರಾದ ಹನುಮಂತ ಕಟ್ಟಿಮನಿಯವರು ನಿರೂಪಿಸಿ ವಂದಿಸಿದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 