ಮಹಾತ್ಮರ ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗದಿರಲಿ: ಪ್ರಸಾದ

ಧಾರವಾಡ 02: ಮಹಾನ್ ವ್ಯಕ್ತಿಗಳ ಜಯಂತಿಗಳು ಕೇವಲ ಆಚರನೆಗೆ ಮಾತ್ರ ಸೀಮಿತವಾಗದೇ ಅವರ ತತ್ವ ಸಿದ್ದಾಂತಗಲ ಪಾಲನೆಯಾದರೆ ಮಾತ್ರ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ. ಭಾರತ ದೇಶದ ಇಬ್ಬರೂ ದೃವತಾರೆಗಳಾದ ಮಹಾತ್ಮಾ ಗಾಂಧೀಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿಯವರ ಜನ್ಮದಿನದಂದು ಅವರು ನೀಡಿರುವ ತತ್ವಗಳನ್ನು ಆದರ್ಶಗಳನ್ನು ಯುವ ಸಮುದಾಯ ಅಳವಡಿಸಿಕೊಳ್ಳಬೇಕು. ದೇಶಕ್ಕೆ ದೊರೆತದ್ದು ಸ್ವಾತಂತ್ರ್ಯ ಸ್ವೇಚ್ಚಾಚಾರವಲ್ಲ ಎಂಬುದನ್ನು ವಿದ್ಯಾಥರ್ಿಗಳಿಗೆ ಹೇಳುವ ಕಾಲ ಬಂದಿದೆ ಎಂದು ಡಾ. ಅಜಿತ ಪ್ರಸಾದ ಹೇಳಿದರು.

ಜೆ.ಎಸ್.ಎಸ್ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಆಯೋಜಿಸಿದ್ದ ಗಾಂಧೀಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿಯವರ ಜನ್ಮದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಅಭಿಪ್ರಾಯ ಪಟ್ಟರು.

ಕೇವಲ ಒಂದು ದಿನದಲ್ಲಿ ನಾವು ಸ್ವಚ್ಛ ಭಾರತ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ವಿದ್ಯಾಥರ್ಿಗಳಲ್ಲಿ ಅರಿವು ಮೂಡಿಸಲು ಈ ಮಹಾನ್ ವ್ಯಕ್ತಿಗಳ ಜನ್ಮದಿನದ ಪ್ರಯುಕ್ತ ಹುಬ್ಬಳ್ಳಿ ಧಾರವಾಡ ಮಹಾನಗರದ ಕಾಲೇಜು ವಿದ್ಯಾಥಿಗಳಿಗಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಬೇಕೆ ಎಂಬ ಪ್ರಬಂಧ ಸ್ಪಧರ್ೆಯನ್ನು ಏರ್ಪಡಿಸಲಾಗಿತ್ತು. ಸುಮಾರು 70ವಿದ್ಯಾಥರ್ಿಗಳು ಈ ಸ್ಪಧರ್ೆಯಲ್ಲಿ ಭಾಗವಹಿಸಿದ್ದರು. ಪ್ಲಾಸ್ಟಿಕ್ ನಿಷೇಧದ ಬಗ್ಗೆ ವಿದ್ಯಾಥರ್ಿಗಳು ಅತ್ಯುತ್ತಮವಾಗಿ ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ ಎಂದು ಹೇಳಿದರು.

ಶುಭಶ್ರಿ ಪ್ರಾಥರ್ಿಸಿದರು. ಡಾ. ಜಿನದತ್ತ ಹಡಗಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಸೂರಜ ಜೈನ್ ಸ್ವಾಗತಿಸಿದರು. ಮಹಾವೀರ ಉಪಾದ್ಯೆ ಉಪಸ್ಥಿತರಿದ್ದರು. ವಿವೇಕ ಲಕ್ಷ್ಮೇಶ್ವರ ನಿರೂಪಿಸಿದರು. ಶೀಕಾಂತ ರಾಗಿ ಕಲ್ಲಾಪೂರ ವಂದಿಸಿದರು. ಪ್ರಬಂಧ ಸ್ಪಧರ್ೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.