ದತ್ತಿನಿಧಿ ಪ್ರಶಸ್ತಿ ಸಮಾರಂಭ ಯಶಸ್ವಿಯಾಗಲಿ: ಶಾಸಕ ಕೆ. ರಾಘವೇಂದ್ರ ಹಿಟ್ನಾಳ
ಕೊಪ್ಪಳ 08: ರಾಜ್ಯದ ಅತಿ ದೊಡ್ಡ ಪತ್ರಕರ್ತರ ಸಂಘಟನೆ ಆಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಪ್ಪಳದಲ್ಲಿ ಹಮ್ಮಿಕೊಂಡಿರುವ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿ ಸಮಾರಂಭವನ್ನು ಹಬ್ಬವಾಗಿ ಆಚರಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.ಇಲ್ಲಿನ ನಗರದ ಕಠಾರೆ ಹಾಗೂ ಪಾನಘಂಟಿ ಕಲ್ಯಾಣ ಮಂಟಪದಲ್ಲಿಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಹಾಗೂ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿರುವ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿ ಸಮಾರಂಭದ ವೇದಿಕೆ ವೀಕ್ಷಿಸಿ ಅವರು ಮಾತನಾಡಿದರು.ಕಾರ್ಯನಿರತರಾಗಿರುವ ವೃತ್ತಿಬಾಂಧವರಿಗೆ ಗೌರವ ನೀಡುವ ನಿಟ್ಟಿನಲ್ಲಿ ರಾಜ್ಯಮಟ್ಟದ ದತ್ತಿನಿಧಿ ಪ್ರಶಸ್ತಿ ಸಮಾರಂಭ ಆಯೋಜಿಸಿರುವುದು ನಮ್ಮೆಲರಿಗೆ ಹರ್ಷ ತಂದಿದೆ. ರಾಜ್ಯದ ನಾನಾ ಜಿಲ್ಲೆಗಳಿಂದ ಖ್ಯಾತ ಪತ್ರಕರ್ತರು ಜಿಲ್ಲೆಗೆ ಆಗಮಿಸುತ್ತಿದ್ದು, ಅವರಿಗೆ ಕಾರ್ಯಕ್ರಮದಲ್ಲಿ ಯಾವುದೇ ಕುಂದುಕೊರತೆಯಾಗದಂತೆ ಮೂಲ ಸೌಕರ್ಯ ಒದಗಿಸಿ. ದತ್ತಿನಿಧಿ ಪ್ರಶಸ್ತಿ ಸಮಾರಂಭವನ್ನು ಐತಿಹಾಸಿಕ ಕಾರ್ಯಕ್ರಮವಾಗಿ ಯಶಸ್ವಿಗೊಳಿಸಿ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಎಚ್.ಎಸ್.ಹರೀಶ್. ಎಂ. ಸಾಧಿಕ್ ಅಲಿ, ಜಿಲ್ಲಾಧ್ಯಕ್ಷ ಹನುಮಂತ ಹಳ್ಳಿಕೇರಿ, ಅಖಿಲ ಭಾರತೀಯ ಕೆಯುಡಬ್ಲ್ಯೂಜೆ ರಾಷ್ಟ್ರೀಯ ಸಂಚಾಲಕ ಮದನಗೌಡ್ರ, ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೋರ್, ಸಂಪಾದಕರ ಸಂಘದ ಅಧ್ಯಕ್ಷ ಕೆಂಚೆಗೌಡ್ರ, ರಾಜ್ಯ ಕಾರ್ಯಕಾರಿಣಿ ಸದಸ್ಯ ರವಿ ಟೆಲಾಕ್ಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ವೈ, ಜಿಲ್ಲಾ ಉಪಾಧ್ಯಕ್ಷ ರುದ್ರಗೌಡ ಪಾಟೀಲ್, ಖಜಾಂಚಿ ರಾಜು ಬಿ.ಆರ್., ಜಿಲ್ಲಾಗೌರವಾಧ್ಯಕ್ಷ ಬಸವರಾಜ ಗುಡ್ಲಾನೂರು, ಕಟ್ಟಡ ಸಮಿತಿ ಅಧ್ಯಕ್ಷ ಎನ್.ಎಂ. ದೊಡ್ಡಮನಿ, ಸದಸ್ಯರಾದ ಧರ್ಮಣ್ಣ ಹಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.