ಬಳ್ಳಾರಿಯಲ್ಲಿ ಎಂ.ಜಿ ಜುವೆಲರ್ಸ್ ಬೆಳ್ಳಿ ಆಭರಣಗಳ ಭಾರಿ ಪ್ರದರ್ಶನ-ಮಾರಾಟ ಮೇಳಮೂರು ದಿನಗಳ ಮೇಳಕ್ಕೆ ಮೇಯರ್ ಪಿ. ಗಾದೆಪ್ಪ ಚಾಲನೆ
Mayor P. Gadeppa inaugurates three-day exhibition and sale of MG Jewellers silver jewellery in Bell
ಬಳ್ಳಾರಿ 14: ನಗರದ ಪ್ರಸಿದ್ಧ ಆಭರಣ ಮಳಿಗೆ ಎಂ.ಜಿ ಜುವೆಲರ್ಸ್ ವತಿಯಿಂದ ಮೂರು ದಿನಗಳ ಕಾಲ ಆಯೋಜಿಸಿರುವ ಬೆಳ್ಳಿ ಆಭರಣಗಳ ಅತಿ ದೊಡ್ಡ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.ನಗರದ ರಾಯಲ್ ಪೋರ್ಟ್ನಲ್ಲಿ ನಡೆದ ಕಾರ್ಯಕ್ರಮವನ್ನು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಪಿ. ಗಾದೆಪ್ಪ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ಇಂದಿನ ಬಂಗಾರದ ಬೆಲೆ ಸಾಮಾನ್ಯರಿಗೆ ಕೈಗೆಟುಕದಂತಾಗಿದೆ. ಇಂತಹ ಸಂದರ್ಭದಲ್ಲಿ ಬೆಳ್ಳಿ ಆಭರಣಗಳು ಉತ್ತಮ ಪರ್ಯಾಯ. ಕಡಿಮೆ ಬೆಲೆಯಲ್ಲಿ ಆಕರ್ಷಕ ವಿನ್ಯಾಸಗಳ ಆಭರಣಗಳನ್ನು ಪರಿಚಯಿಸಿರುವುದು ಶ್ಲಾಘನೀಯ,” ಎಂದು ಹೇಳಿದರು.
ಮೇಳದಲ್ಲಿ ವಿವಿಧ ವಿನ್ಯಾಸಗಳ ನವೀನ ಬೆಳ್ಳಿ ಆಭರಣಗಳು, ಸಂಪ್ರದಾಯಬದ್ಧ ಹಾಗೂ ಆಧುನಿಕ ಶೈಲಿಯ ಅಲಂಕಾರಿಕ ವಸ್ತುಗಳು ಗ್ರಾಹಕರಿಗಾಗಿ ಪ್ರದರ್ಶನ ಹಾಗೂ ಮಾರಾಟಕ್ಕೆ ಲಭ್ಯವಿರಲಿವೆ ಎಂದು ಸಂಸ್ಥೆ ತಿಳಿಸಿದೆ. ಎಂ.ಜಿ ಜುವೆಲರ್ಸ್ ಸಂಸ್ಥೆಯು ಮೂಲತಃ ಅನಂತಪುರದಲ್ಲಿ ಸ್ಥಾಪನೆಯಾಗಿ, ಕಳೆದ 25 ವರ್ಷಗಳಿಂದ ವಿಶೇಷ ಪ್ರದರ್ಶನ-ಮಾರಾಟ ಮೇಳಗಳನ್ನು ಆಯೋಜಿಸುತ್ತ ಬಂದಿದೆ. ಈ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯವರು ಗ್ರಾಹಕರಿಗೆ ಮನವಿ ಮಾಡಿದ್ದಾರೆ.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ತೆರಿಗೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರಾದ ವಿ. ಕುಬೇರ, ಕೌಶಿಕ್ ಯಾದವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 