ಅರ್ಥಪೂರ್ಣ ಪತ್ರಿಕಾ ದಿನಾಚರಣೆ: ಪತ್ರಕರ್ತರಿಗೆ ಸನ್ಮಾನ
Meaningful Press Day Celebration: Journalists Honoured
ಸವದತ್ತಿ 02: ಸಮಾಜದ ಆರೋಗ್ಯಕರ ಬೆಳವಣಿಗೆಯಲ್ಲಿ ಮಾಧ್ಯಮಗಳ ಪಾತ್ರ ಮಹತ್ತರವಾದುದು. ಪತ್ರಕರ್ತರು ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುತ್ತಾ, ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕೆಂದು ಬಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷ ವಿರೂಪಾಕ್ಷ ಮಾಮನಿ ಹೇಳಿದರು.ನಗರದ ಎಪಿಎಂಸಿ ಆವರಣದಲ್ಲಿರುವ ಅವರ ಕಾರ್ಯಾಲಯದಲ್ಲಿ ಮಾಮನಿ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಬರಹ ಎಂಬುದು ಖಡ್ಗದಂತೆ, ಅದನ್ನು ಸಮಾಜದ ಒಳಿತಿಗಾಗಿ ಬಳಸಬೇಕು.
ಹಗಲಿರುಳು, ಬಿಸಿಲು-ಮಳೆ ಎನ್ನದೆ ನಿರಂತರವಾಗಿ ಜನರಿಗೆ ಸುದ್ದಿ ತಲುಪಿಸುವ ಮಾಧ್ಯಮ ಮಿತ್ರರ ನಿಸ್ವಾರ್ಥ ಸೇವೆ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಮನಿ ಫೌಂಡೇಶನ್ ವತಿಯಿಂದ ಅಗತ್ಯವಿರುವ ಎಲ್ಲ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಸವರಾಜ ಪುಟ್ಟಿ ಮಾತನಾಡಿ, ಪತ್ರಿಕಾ ರಂಗದಲ್ಲಿನ ತಮ್ಮ ಹಳೆಯ ದಿನಗಳನ್ನು ಸ್ಮರಿಸಿದರು. ಸುದ್ದಿಯನ್ನು ಮನೆಮನೆಗೆ ತಲುಪಿಸುವ ಪತ್ರಿಕಾ ವಿತರಕರ ಸೇವೆ ನಿಜಕ್ಕೂ ಶ್ಲಾಘನೀಯ. ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಮಾಹಿತಿ ನೀಡುವ ಅವರ ಕಾಯಕ ಸಮಾಜಕ್ಕೆ ದೊಡ್ಡ ಕೊಡುಗೆ ಎಂದು ಬಣ್ಣಿಸಿದರು.ರಾಜಶೇಖರ ಕಾರದಗಿ, ರಾಜು ನಿಡವಣಿ, ಮಹಾರಾಜಗೌಡ ಪಾಟೀಲ್, ವೆಂಕಣ್ಣ ಒಂಟಗೂಡಿ, ಪುಂಡಲೀಕ ಮಾದರ, ರಾಜು ಕಗದಾಳ, ಮಹಾಂತೇಶ ಶಿಂತ್ರಿ, ಶಂಕರ ಬೂಶನವರ, ಬಾಬು ಕಡಕೋಳ, ಗುರ್ಪ ಚಿಕ್ಕುಂಬಿ, ಸುನೀಲ್ ಮಾಮನಿ, ರಾಜು ಲಮ್ಮಾಣಿ, ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 