ಜಿಲ್ಲಾಡಳಿತದಿಂದ ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆ: ಡಾ.ವೆಂಕಟೇಶ್
ಹಾವೇರಿ10: ಜಿಲ್ಲಾಡಳಿತದಿಂದ ಜನವರಿ 26 ರಂದು ಅರ್ಥಪೂರ್ಣವಾಗಿ ಗಣರಾಜ್ಯೋತ್ಸವ ಆಚರಿಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಅಧಿಕಾರಿಗಳು ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಪೂರ್ವ ಸಿದ್ಧತಾ ಸಭೆ ನಡೆಸಿದ ಅವರು, ಅತ್ಯಂತ ಉತ್ಸಾಹ ಮತ್ತು ಸಂಭ್ರಮದಿಂದ ಗಣರಾಜ್ಯೋತ್ಸವ ಆರಚರಿಸುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಕವಾಯತು, ಸ್ಥಬ್ಧಚಿತ್ರ ಮೆರವಣಿಗೆ, ಸಾಧಕರಿಗೆ ಸನ್ಮಾನ ಒಳಗೊಂಡಂತೆ ವಿಭಿನ್ನವಾದ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು.
ಅಂದು ಬೆಳಿಗ್ಗೆ 9 ಗಂಟೆಗೆ ಹೊಸಮನಿ ಸಿದ್ಧಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ರಾಷ್ಟ್ರಧ್ವಜಾರೋಹಣದಲ್ಲಿ ಯಾವುದೇ ಲೋಪವಾಗದಂತೆ ಗರಿಷ್ಠ ಎಚ್ಚರಿಕೆಯಿಂದ ಧ್ವಜಾ ರೋಹಣ ವ್ಯವಸ್ಥೆಕೈಗೊಳ್ಳಬೇಕು. ಪಥಸಂಚಲನಕ್ಕೆ ಪೊಲೀಸ್, ಹೋಂಗಾಡರ್್, ಎನ್.ಸಿ.ಸಿ., ಶಾಲಾ-ಕಾಲೇಜು ವಿದ್ಯಾಥರ್ಿಗಳು ಸೇರಿದಂತೆ ವ್ಯವಸ್ಥಿತವಾಗಿ ತರಬೇತಿ ನೀಡಬೇಕು ಎಂದು ತಿಳಿಸಿದರು.
ಸಾರ್ವಜನಿಕರಿಗೆ ಮತ್ತು ವಿದ್ಯಾಥರ್ಿಗಳಿಗೆ, ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಕ್ರೀಡಾಂಗಣದಲ್ಲಿ ವ್ಯವಸ್ಥಿತವಾದ ಆಸನದ ವ್ಯವಸ್ಥೆ, ಮೈಲಾರ ಮಹದೇವಪ್ಪ ವೃತ್ತದಿಂದ ಶಿಸ್ತುಬದ್ಧ ಮೆರವಣಿಗೆ, ದೇಶಪ್ರೇಮ, ನಾಡ ಪ್ರೇಮದ ಉತ್ಸಾಹ ಬಿಂಬಿಸುವ ಗೀತೆಗಳಿಗೆ ನೃತ್ಯ ಸಂಯೋಜನೆ, ಶಾಲಾ-ಕಾಲೇಜು ಹಾಗೂ ಜವಾಹರ ನವೋದಯ, ಕೇಂದ್ರೀಯ ವಿದ್ಯಾಲಯ, ಮೊರಾಜರ್ಿ ವಸತಿ ನಿಲಯ ವಿದ್ಯಾಥರ್ಿಗಳನ್ನು ಕಾರ್ಯಕ್ರಮದಲ್ಲಿ ಭಾಗವಹಿಸಲು ಸೂಚಿಸಿದರು.
ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಲು ವಿವಿಧ ಸಮಿತಿಗಳನ್ನು ರಚಿಸಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿನೋದ ಹೆಗ್ಗಳಗಿ, ಉಪವಿಭಾಗಾಧಿಕಾರಿ ಟಿ.ತಿಪ್ಪೇಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿದರ್ೆಶಕ ಪೀರಜಾದೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ, ಡಿ.ವೈ.ಎಸ್.ಪಿ.ಕುಮಾರಪ್ಪ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 