ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ನಿರ್ಧಾರಶಿಷ್ಟಾಚಾರದನ್ವಯ ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ
Meaningful celebration of the birth anniversary of the great leader as per the decision-making etiq
ಬಳ್ಳಾರಿ 06: ಜಿಲ್ಲಾ ಕೇಂದ್ರದಲ್ಲಿ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಶಿಷ್ಟಾಚಾರದನ್ವಯ ಅಚ್ಚುಕಟ್ಟಾಗಿ ಆಯೋಜಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುವುದು. ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮ ಆಚರಣೆ ಕುರಿತು ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳು, ಸಮುದಾಯದ ಮುಖಂಡರೊಂದಿಗೆ ಗುರುವಾರ ಏರಿ್ಡಸಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತದಿಂದ ಫೆ.15 ರಂದು ಸಂತ ಸೇವಾಲಾಲ್ ಜಯಂತಿ, ಫೆ.19 ರಂದು ಛತ್ರಪತಿ ಶಿವಾಜಿ ಜಯಂತಿ ಮತ್ತು ಫೆ.20 ರಂದು ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮಗಳನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಅಚ್ಚುಕಟ್ಟಾಗಿ ಆಯೋಜಿಸಲು ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.ಬ್ಯಾನರ್ ಅಳವಡಿಕೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಸೂಚನೆಗಳಿದ್ದು, ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯಲೇ ಬೇಕು.
ಡಿಜೆ ಧ್ವನಿವರ್ಧಕ ಬಳಕೆ, ಬೈಕ್ ರಾ್ಯಲಿಗೆ ಅವಕಾಶವಿಲ್ಲ. ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಭಕ್ತಿ-ಭಾವದಿಂದ ಮಹನೀಯರ ಜಯಂತಿ ಆಚರಿಸೋಣ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದರು.ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ, ಸಂಘ-ಸಂಸ್ಥೆಗಳಿಗೆ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಮಹನೀಯರ ಆಚಾರ-ವಿಚಾರಗಳನ್ನು ಪರಿಣಿತರಿಂದ ವಿಶೇಷ ಉಪನ್ಯಾಸ ಮೂಲಕ ತಲುಪಿಸಲು ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಬೇಕು ಎಂದರು.ಜಯಂತಿ ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ನಡೆಯಲಿದ್ದು, ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು ಎಂದರು.
ವೇದಿಕೆ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ ಕಾರ್ಯವನ್ನು ನಿರ್ವಹಿಸಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದರು. ಇದೇ ವೇಳೆ ಸಮಾಜದ ಮುಖಂಡರು ಜಯಂತಿ ಕಾರ್ಯಕ್ರಮ ಯಶಸ್ವಿಗೆ ತಮ್ಮ ಸಲಹೆ-ಸೂಚನೆ ನೀಡಿದರು.ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಮಹಾನಗರ ಪಾಲಿಕೆ, ಪೊಲೀಸ್ ಅಧಿಕಾರಿಗಳು, ಡಿಡಿಪಿಐ, ಅಧಿಕಾರಿಗಳು ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 