ಕೊಪ್ಪಳ 13: ಜಿಲ್ಲಾಡಳಿತದ ವತಿಯಿಂದ ಡಿ. ದೇವರಾಜ ಅರಸು ಅವರ 104ನೇ ಜನ್ಮ ದಿನಾಚರಣೆಯನ್ನು ಇದೇ ಆಗಸ್ಟ್. 20 ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿ ಸೈಯದಾ ಅಯಿಷಾ ಅವರು ಹೇಳಿದರು.
ಡಿ. ದೇವರಾಜ ಅರಸು ರವರ ಜನ್ಮ ದಿನಾಚರಣೆ ಆಚರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಕೇಂದ್ರವಾದ ಕೊಪ್ಪಳದಲ್ಲಿ ದಿವಂಗತ ಡಿ. ದೇವರಾಜ ಅರಸುರವರ ಜನ್ಮ ದಿನಾಚರಣೆಯನ್ನು ಆಗಸ್ಟ್. 20 ರಂದು ಬೆಳಿಗ್ಗೆ 09 ಗಂಟೆಗೆ ಡಿ. ದೇವರಾಜ ಅರಸುರವರ ಭಾವಚಿತ್ರದ ಮೆರವಣಿಗೆ ನಗರದ ಗವಿಮಠದಿಂದ ಪ್ರಾರಂಭಗೊಂಡು ಸಾಹಿತ್ಯ ಭವನದವರೆಗೆ ನಡೆಯಲಿದೆ. ನಂತರ ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ಏರ್ಪಡಿಸಲಾಗಿದ್ದು, ಶಿಷ್ಟಾಚಾರದಂತೆ ಗಣ್ಯರು ಹಾಗೂ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಕಾರ್ಯಕ್ರಮದಲ್ಲಿ ಡಿ. ದೇವರಾಜ ಅರಸುರವರ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ. ಮೆರವಣಿಗೆಯಲ್ಲಿ ಎರಡು ವಿಶೇಷ ಕಲಾ ತಂಡಗಳನ್ನು ಆಯ್ಕೆ ಮಾಡಿ ಮೆರವಣಿಗೆಯನ್ನು ಆಕರ್ಷಕಗೊಳಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಡಿ. ದೇವರಾಜ ಅರಸು ಜನ್ಮ ದಿನಾಚರಣೆಯ ಕಾರ್ಯಕ್ರಮದ ದಿನದಂದು ರಸ್ತೆ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕೊಪ್ಪಳ ನಗರಸಭೆಯವರು ಕೈಗೊಳ್ಳಬೇಕು. ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ದಿವಂಗತ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿದ್ಯಾರ್ಥಿ ನಿಲಯಗಳ ಗರಿಷ್ಠ ಅಂಕ ಪಡೆದ ವಿದ್ಯಾಥರ್ಿಗಳನ್ನು ಸನ್ಮಾನಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಈಶಪ್ಪ ಆಶಾಪುರ ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂತರ್ಿ ದೇಸಾಯಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪಿ. ರಮೇಶ, ನಗರ ಪೊಲೀಸ್ ಠಾಣೆಯ ಪಿಐ ಶಿವಾನಂದ ವಾಲಿಕಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.