ಗೋವಾದ ಮಾಶೆಮ್ ಬಳಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗೆ ಅಪಘಾತ
Medical college student meets with accident near Mashem, Goa
ಗೋವಾದ ಮಾಶೆಮ್ ಬಳಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗೆ ಅಪಘಾತ
ಕಾರವಾರ: ಗೋವಾದ ಮಾಶೆಮ್ ಬಳಿ ಮಂಗಳವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರವಾರದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿ ಆದರ್ಶ ಪೂಜಾರಿ(23) ಎಂದು ತಿಳಿದು ಬಂದಿದೆ. ಕಾರವಾರದ ಮೆಡಿಕಲ್ ಕಾಲೇಜಿನಲ್ಲಿ ಮೂರನೇ ವರ್ಷದಲ್ಲಿ ಓದುತ್ತಿದ್ದ . ಗಾಯಗೊಂಡ ವಿದ್ಯಾರ್ಥಿ ರೌನಕ್ ಚಾವ್ಲಾ ಎಂದು ಗೊತ್ತಾಗಿದೆ. ಆತನಿಗೆ ಕಾರವಾರ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಮುಂದುವರಿದಿದೆ.ಪೊಲೀಸ್ ವರದಿಗಳ ಪ್ರಕಾರ, ಇಬ್ಬರು ವಿದ್ಯಾರ್ಥಿಗಳು ಉಂ 49, ಇಅ 2998 ನೋಂದಣಿ ಸಂಖ್ಯೆಯನ್ನು ಹೊಂದಿರುವ ರಾಯಲ್ ಎನ್ಫೀಲ್ಡ್ ಮೋಟಾರ್ಸೈಕಲ್ನಲ್ಲಿ ಕಾಣಕೋಣದಿಂದ ಕಾರವಾರಕ್ಕೆ ಪ್ರಯಾಣಿಸುತ್ತಿದ್ದರು.ಹೈವೇದಲ್ಲಿನ ಮಾಶೆಮ್ ಗ್ರಾಮದ ಬಳಿ, ಎಮ್ಮೆ ಇದ್ದಕ್ಕಿದ್ದಂತೆ ರಸ್ತೆಗೆ ಅಡ್ಡ ಬಂದಿದೆ. ಇದರಿಂದಾಗಿ ಬೈಕ್ ಸ್ಕಿಡ್ ಆಗಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರೂ ಸವಾರರು ತೀವ್ರ ಗಾಯಗೊಂಡರು.ಸ್ಥಳೀಯ ನಿವಾಸಿಗಳು ಗಾಯಗೊಂಡ ವಿದ್ಯಾರ್ಥಿಗಳನ್ನು ಕಾಣಕೋಣ ಸಮುದಾಯ ಆರೋಗ್ಯ ಕೇಂದ್ರ ಕ್ಕೆ ಕರೆದೊಯ್ದರು. ದಾರಿ ಮಧ್ಯೆ ಆದರ್ಶ ಮೃತಪಟ್ಟಿದ್ದಾನೆಂದು ವೈದ್ಯರು ಘೋಷಿಸಿದರು.ಕಾರವಾರ ದಿಂದ ಕಾಣಕೋಣಕ್ಕೆ ಊಟ ಮಾಡಲು ಪ್ರಯಾಣಿಸಿ, ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ವಿದ್ಯಾರ್ಥಿ ಅದರ್ಶ ಪೂಜಾರಿಯವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಾನಿಗೊಳಗಾದ ಮೋಟಾರ್ ಸೈಕಲ್ ಮತ್ತು ರಸ್ತೆಬದಿಯಿಂದ ಎಮ್ಮೆಯ ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ. ಕಾಣಕೋಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ...
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 