ಧ್ಯಾನ ಮತ್ತು ಸಕಾರಾತ್ಮಕ ಚಿಂತನೆಯಿಂದ ಒತ್ತಡವನ್ನು ಕಡಿಮೆ ಮಾಡಬಹುದು: ಡಾ. ಚಂದ್ರಶೇಖರ ಹಳಿಂಗಳೆ..!

Meditation and positive thinking can reduce stress: Dr. Chandrasekhara Halingale..!

ಧ್ಯಾನ ಮತ್ತು ಸಕಾರಾತ್ಮಕ ಚಿಂತನೆಯಿಂದ ಒತ್ತಡವನ್ನು ಕಡಿಮೆ ಮಾಡಬಹುದು: ಡಾ. ಚಂದ್ರಶೇಖರ ಹಳಿಂಗಳೆ..! 

ಕಾಗವಾಡ 23: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬರೂ ಒತ್ತಡಕ್ಕೆ ಒಳಗಾಗುತ್ತಿದ್ದು, ಸರಿಯಾದ ಯೋಜನೆ, ಮಾನಸಿಕ ಸ್ಥಿಮಿತದಿಂದ ಅದನ್ನು ನಿಯಂತ್ರಿಸಬಹುದಾಗಿದೆ. ಒತ್ತಡದಿಂದ ಪೊಲೀಸರು ಹೊರತಾಗಿಲ್ಲ. ತಮ್ಮ ದಿನನಿತ್ಯದ ಕಾರ್ಯಗಳಲ್ಲಿ ಅವರೂ ಸಹ ಒತ್ತಡಕ್ಕೆ ಒಳಗಾಗುತ್ತಾರೆ. ದೈಹಿಕ ವ್ಯಾಯಾಮ, ಯೋಗ, ಧ್ಯಾನ ಮತ್ತು ಸಕಾರಾತ್ಮಕ ಚಿಂತನೆಯಿಂದ ಒತ್ತಡವನ್ನು ಕಡಿಮೆ ಮಾಡಬಹುದಾಗಿದೆ ಎಂದು ನಿರ್ಮಲ ಆಸ್ಪತ್ರೆಯ ಡಾ. ಚಂದ್ರಶೇಖರ ಹಳಿಂಗಳೆ ತಿಳಿಸಿದ್ದಾರೆ. ಅವರು ಇತ್ತಿಚಿಗೆ ಸಾಂಗಲಿ ಜಿಲ್ಲೆಯ ತಾಸಗಾಂವನ ತುರಚಿ ಪೊಲೀಸ್ ತರಬೇತಿ ಕೇಂದ್ರದಲ್ಲಿ ಹೊಸದಾಗಿ ನೇಮಕಗೊಂಡ ಪೊಲೀಸರಿಗೆ ಒತ್ತಡ ರಹಿತ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವ ಮತ್ತು ಒತ್ತಡ ನಿಯಂತ್ರಣದ ಕುರಿತು ವಿಶೇಷ ಮಾರ್ಗದರ್ಶನ ಶಿಬಿರದಲ್ಲಿ ಮಾತನಾಡುತ್ತಿದ್ದರು.  ವೃತ್ತಿಪರ ಜೀವನ ಮತ್ತು ಕೌಟುಂಬಿಕ ಜೀವನವನ್ನು ಸಮತೋಲನಗೊಳಿಸುವ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದ ಅವರು, ಒತ್ತಡದಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಸಮಸ್ಯೆಗಳು ಬರದಂತೆ ಸೂಕ್ತ ಸಲಹೆ ಹಾಗೂ ಸಕಾಲದಲ್ಲಿ ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ವಿವರಿಸಿದರು. ಈ ವೇಳೆ ಡಾ. ನಿಶಾ ಹಳಿಂಗಳೆ, ಪೊಲೀಸ್ ತರಬೇತಿ ಕೇಂದ್ರದ ನಿರಿಕ್ಷಕ ಹಿಮ್ಮತ ಮಾನೆ-ಪಾಟೀಲ, ರೇಷ್ಮಾ ಮುಲಾನಿ ಸೇರಿದಂತೆ ಹಿರಿಯ ಪೊಲೀಸ ಅಧಿಕಾರಿಗಳು, ಸಿಬ್ಬಂದಿಗಳು, ನಿರ್ಮಲ ಆಸ್ಪತ್ರೆಯ ಪ್ರತಿನಿಧಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.