ಧಾರವಾಡ 07: ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ಅವರು ಜ.6ರಂದು 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮಾಧ್ಯಮ ಕೇಂದ್ರಕ್ಕೆ ಭೇಟಿ ನೀಡಿದರು.
ಮಾಧ್ಯಮ ಕೇಂದ್ರದಲ್ಲಿನ ಊಟ-ಉಪಾಹಾರ ಸೇರಿದಂತೆ ಅಲ್ಲಿನ ಎಲ್ಲಾ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದರು. ಕೇಂದ್ರದಲ್ಲಿ ಎಲ್ಲಾ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ ಎಂದು ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿದರ್ೇಶಕರಾದ ಮಂಜುನಾಥ ಡೊಳ್ಳಿನ ಅವರು ಜಿಲ್ಲಾಧಿಕಾರಿ ಅವರಿಗೆ ಮಾಹಿತಿ ನೀಡಿದರು.
ಅಕ್ಷರ ಜಾತ್ರೆ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸುಮಾರು ತಿಂಗಳುಗಳಿಂದ ನಿರಂತರ ತಯಾರಿ ಮಾಡಿಕೊಳ್ಳಲಾಗಿತ್ತು. ಸಮ್ಮೇಳನದ ಎಲ್ಲ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆದಿವೆ. ಸಾಂಸ್ಕೃತಿಕ ರಾಜಧಾನಿ ಧಾರವಾಡದಲ್ಲಿ ನಡೆದ ಈ ಸಾಹಿತ್ಯ ಸಮ್ಮೇಳನ ಐತಿಹಾಸಿಕವಾದುದಾಗಿದೆ. ಈ ಸಮ್ಮೇಳನ ಯಶಸ್ವಿಯಾಗಿ ನಡೆಯಿತು ಎಂಬುದು ನನ್ನ ಭಾವನೆಯಾಗಿದೆ. ಸಮ್ಮೇಳನಕ್ಕೆ ಸಹಕರಿಸಿದ ಧಾರವಾಡ ಮತ್ತು ಹುಬ್ಬಳ್ಳಿಯ ಅವಳಿ ನಗರದ ಜನತೆಗೆ ಧನ್ಯವಾದಗಳು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ.ಬಿ.ಸಿ.ಸತೀಶ, ಉಪ ಪೊಲೀಸ್ ಆಯುಕ್ತರಾದ ಬಿ.ಎಸ್.ನೇಮಗೌಡ, ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಿಲ್ಲಾ ಅಧಿಕಾರಿ ಮಂಜುನಾಥ ಡೊಳ್ಳಿನ ಹಾಗೂ ಇಲಾಖೆಯ ಇನ್ನೀತರ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.