ಬಾಗೇವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿ.ಪಂ ಅಧ್ಯಕ್ಷರ ಭೇಟಿ

ಗದಗ 09: ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಾಗೂ ನರಗುಂದ, ರೋಣ ತಾಲೂಕಿನ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಗಳಿಗೆ ಗದಗ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಎಸ್.ಪಿ.ಬಳಿಗಾರ ಅವರು ಇಂದು ಭೇಟಿ ನೀಡಿದರು. 

ಆರೋಗ್ಯ ಕೇಂದ್ರದಲ್ಲಿನ ಔಷಧಗಳ ಲಭ್ಯತೆ, ಸ್ವಚ್ಛತೆ ಕುರಿತು ಪರೀಶಿಲಿಸಿ,  ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವವರೊಂದಿಗೆ ಸೌಜನ್ಯದಿಂದ ವತರ್ಿಸಿ ಉತ್ತಮ ಸೇವೆ ನೀಡಲು ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಸೂಚಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶಂಕರ ಭಾವಿಮನಿ, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪೌಷ್ಟಿಕ ಆಹಾರ ಘಟಕಕ್ಕೆ ಜಿ.ಪಂ ಅಧ್ಯಕ್ಷರ ಭೇಟಿ: ಕೇಂದ್ರಗಳಲ್ಲಿ ತಯಾರಾಗುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರೀಕ್ಷಿಸಿದರು. ನಿರಂತರವಾಗಿ ಗುಣಮಟ್ಟದ ಆಹಾರ ಪದಾರ್ಥಗಳನ್ನು ನಿಗದಿತ ಸಮಯದಲ್ಲಿ ಅಂಗನವಾಡಿಗಳಿಗೆ ಸರಬರಾಜು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿದರ್ೆಶಕ ರಾಮಕೃಷ್ಣ ಪಡಗಣ್ಣವರ, ಇಲಾಖೆಯ ತಾಲೂಕಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.