ಕಳಪೆ ಮೆಕ್ಕೆಜೋಳ ಬಿತ್ತನೆ ಬೀಜದಿಂದ ಮೋಸಹೋದ ರೈತರ ಮತ್ತು ಅಧಿಕಾರಿಗಳ ಸಭೆ
Meeting of farmers and officials who were cheated by poor quality maize seeds
ರಾಣೇಬೆನ್ನೂರು 31: ಕಂಪನಿಯ ಕಳಪೆ ಮೆಕ್ಕೆಜೋಳದ ಬಿತ್ತನೆ ಬೀಜದಿಂದ ಮೋಸಹೋದ ರೈತರ ಮತ್ತು ಅಧಿಕಾರಿಗಳ ಸಭೆಯನ್ನು ನವೆಂಬರ್ 03-25 ರಂದು ಸೋಮವಾರ ಮುಂಜಾನೆ 11 ಘಂಟೆಗೆ ರಾಣೇಬೆನ್ನೂರಿನ ಹಲಗೇರಿ ರಸ್ತೆಯ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಕರೆಯಲಾಗಿದೆ. ಸಭೆಯಲ್ಲಿ ಕಳಪೆಬೀಜ ಪೂರೈಸಿದ ಕಂಪನಿಯ ಮಾಲೀಕರ ಮೇಲೆ ಸರಕಾರ ಯಾವ ಕ್ರಮ ಕೈಗೊಂಡಿದೆ, ತನಿಖಾ ಹಂತ ಏನಾಯಿತು, ನ್ಯಾಯಾಲಯದಲ್ಲಿ ಪ್ರಕರಣ ಏನಾಗಿದೆ ಮತ್ತು ಕಂಪನಿಯ ಮಾಲೀಕನ ಆಸ್ತಿ ಮತ್ತು ಬ್ಯಾಂಕ್ ಖಾತೆ ಮುಟ್ಟುಗೋಲು ಹಾಕಿಕೊಳ್ಳುವ ಬಗ್ಗೆ ಯಾವ ತೀರ್ಮಾನ ತೆಗೆದುಕೊಳ್ಳಲಾಗಿದೆ ಮತ್ತು ಮೋಸಹೋದ ರೈತರಿಗೆ ಸರಕಾರದಿಂದ ಪರಿಹಾರ ಕೊಡುವ ಬಗ್ಗೆ ಏನೇನು ಕ್ರಮ ಜರುಗಿಸಲಾಗಿದೆ ಹಾಗೂ ಮುಂದಿನ ಹೋರಾಟದ ರೂಪರೇಶಗಳ ಬಗ್ಗೆ ಚರ್ಚಿಸಲಾಗುವುದು. ಈ ಸಭೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ತಪ್ಪದೇ ಹಾಜರಿದ್ದು ಸಂಪೂರ್ಣ ಮಾಹಿತಿ ನೀಡಬೇಕು ಎಂದು ಹೋರಾಟ ಸಮೀತಿಯ ಅಧ್ಯಕ್ಷ ರವೀಂದ್ರಗೌಡ ಪಾಟೀಲ ಹಾಗೂ ಈರಣ್ಣ ಹಲಗೇರಿ ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 