ಬ್ಯಾಡಗಿಯಲ್ಲಿ ಒಕ್ಕಲುತನ ಹುಟ್ಟುವಳಿ ಸಹಕಾರಿ ಸಂಘದ ಸಭೆ
Meeting of the Okkalutana Nativity Cooperative Society in Byadgi
ಬ್ಯಾಡಗಿಯಲ್ಲಿ ಒಕ್ಕಲುತನ ಹುಟ್ಟುವಳಿ ಸಹಕಾರಿ ಸಂಘದ ಸಭೆ
ಬ್ಯಾಡಗಿ 16: ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ 2025 ರ 105 ನೇ ವಾರ್ಷಿಕ ಮಹಾ ಸಭೆಯು ಅಧ್ಯಕ್ಷ ಪರಮೇಶಗೌಡ ತೆವರಿ ಅಧ್ಯಕ್ಷತೆಯಲ್ಲಿ ನಡೆಯಿತು. ಪಟ್ಟಣದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆವರಣದಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷ ನಾಗನಗೌಡ ಪಾಟೀಲ ಮಾತನಾಡಿ ರೈತರ ಷೇರು ಹಣದಿಂದಲೇ ಅಭಿವೃದ್ಧಿ ಹೊಂದುತ್ತಿರುವ ಸಂಘ ರೈತ ಪರವಾಗಿದ್ದುಕೊಂಡು ರೈತರ ಸಲಹೆ ಸೂಚನೆಗಳನ್ನು ಅನುಸರಿಸಿ ನೆಡೆಯುವುದು. ರೈತ ಪರವಾಗಿದ್ದುಕೊಂಡು ಕಾರ್ಯನಿರ್ವಹಿಸಲು ಆಡಳಿತ ಮಂಡಳಿ ಬದ್ಧವಾಗಿದೆ. ಎಲ್ಲರೂ ಒಗ್ಗಟ್ಟಿನಿಂದ ಇದ್ದು ಸಂಘವನ್ನು ಅಭಿವೃದ್ಧಿ ಪಡಿಸಬೇಕಿದೆ ಎಂದರು. ತಾಲ್ಲೂಕಾ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆವರಣದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಸರ್ವಸದಸ್ಯರು ಹಲವು ಸಲಹೆ, ಸೂಚನೆಗಳನ್ನು ನೀಡಿದರು. ಸಂಘದ ವ್ಯವಸ್ಥಾಪಕ ಪ್ರಭು ಬಣಕಾರ ಸ್ವಾಗತದೊಂದಿಗೆ ವಾರ್ಷಿಕ ವರದಿಯನ್ನು ಸಭೆಯಲ್ಲಿ ಓದಿದರು ಸದಸ್ಯರ ಸಲಹೆ ಸೂಚನೆಗಳನ್ನು ಪಾಲಿಸುವುದಾಗಿ ಸಭೆಗೆ ತಿಳಿಸಿದರು.ಸಭೆಯಲ್ಲಿ ಸಂಘದ ನಿರ್ದೇಶಕರಾದ ಕುಮಾರ ಚೂರಿ, ಚನ್ನಬಸನಗೌಡ ಹೊಟ್ಟಿಗೌಡ, ಜಗದೀಶ ಕಿರವಾಡಿ, ಚನ್ನಬಸಪ್ಪ ಹುಲ್ಲತ್ತಿ, ಪ್ರಮೀಳಾ ಬಿದರಕಟ್ಟಿ, ಪ್ರೇಮಾ ತೋಟದ, ಸೋಮೇಶ್ವರ ಚವಟಿ, ಚಂದ್ರ್ಪ ಬಾರ್ಕಿ, ಮಂಜನಗೌಡ ಲಿಂಗನಗೌಡ, ಗಂಗಣ್ಣ ಎಲಿ, ಜಿ.ಎಸ್ ಬಸನಗೌಡ, ವಿ.ಕೆ ಪೂಜಾರ ಸೇರಿದಂತೆ ಸಿಬ್ಬಂದಿಗಳು ಹಾಗೂ ಇನ್ನಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 