ವಿದ್ಯಾರ್ಥಿಗಳಿಗೆ ನೀಡುವ ಸೌಲಭ್ಯ ಕುರಿತು ಸಭೆ
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಪೌರಕಾರ್ಮಿಕರ ಸಮಸ್ಯೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಹಾಗೂ ವಿದ್ಯಾರ್ಥಿಗಳಿಗೆ ನೀಡುವ ಸೌಲಭ್ಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಉಮೇಶ್ ಕೆ.ವೈ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನ ನಿರ್ದೇಶಕಿ ಸ್ಟೇಲಾ ವರ್ಗಿಸ್, ಸಿ.ಇ.ಎನ್ ಅಪರಾಧ ವಿಭಾಗದ ಡಿವೈಎಸ್ಪಿ ಬಿ. ಆಶ್ವಿನಿ, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಾಗೃತಿ ಸಮಿತಿಯ ಸದಸ್ಯರು ಮತ್ತಿತರರು ಇದ್ದರು.