ದೇವರಹಿಪ್ಪರಗಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಬಲಪಡಿಸುವ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಭೇಟಿ

ದೇವರಹಿಪ್ಪರಗಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಬಲಪಡಿಸುವ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಭೇಟಿ Meeting with the State BJP President regarding strengthening the party organization in Devarahippar


ವಿಜಯಪುರ   16: ಇಂದು ಶ್ರಿ ಬಸನಗೌಡ ಎಸ್‌. ಪಾಟೀಲ (ಯಡಿಯಾಪೂರ), ಸಾಽಽ ಬಿ. ಸಾಲವಾಡಗಿ ಹಾಗೂ ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷರು ಮತ್ತು ಹಾಲಿ ನಿರ್ದೇಶಕರಾದ ಗುಲ್ಬರ್ಗಾದ ಶ್ರೀ ಸುರೇಶ್ ಸಜ್ಜನ ಅವರು ಕರ್ನಾಟಕ ರಾಜ್ಯದ ಭಾರತೀಯ ಜನತಾ ಪಕ್ಷದ ಯುವ ಮುಖಂಡರು ಹಾಗೂ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಸಾಹೇಬ್ರನ್ನು ಶಿಷ್ಟಾಚಾರವಾಗಿ ಭೇಟಿ ಮಾಡಿದರು.ಈ ಸಂದರ್ಭದಲ್ಲಿ ದೇವರಹಿಪ್ಪರಗಿ ವಿಧಾನಸಭಾ ಮತಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮತ್ತಷ್ಟು ಬಲಪಡಿಸುವ ಅಗತ್ಯತೆ, ಕಾರ್ಯಕರ್ತರ ಸಕ್ರಿಯತೆ, ಬೂತ್ ಮಟ್ಟದ ಸಂಘಟನೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ತಂತ್ರ ರೂಪಣೆ ಕುರಿತು ಸವಿಸ್ತಾರವಾಗಿ ಚರ್ಚಿಸಿ ಮನವರಿಕೆ ಮಾಡಲಾಯಿತು.ಪಕ್ಷದ ನೆಲಮಟ್ಟದ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸವಾಗಬೇಕು ಹಾಗೂ ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಇನ್ನಷ್ಟು ಬಲಿಷ್ಠವಾಗುವಂತೆ ಸೂಕ್ತ ಮಾರ್ಗದರ್ಶನ ನೀಡುವಂತೆ ರಾಜ್ಯಾಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು. ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಶ್ರೀ ಬಿ.ವೈ. ವಿಜಯೇಂದ್ರ ಅವರು ದೇವರಹಿಪ್ಪರಗಿ ಕ್ಷೇತ್ರದ ಸಂಘಟನೆಗೆ ಅಗತ್ಯ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.ಈ ಭೇಟಿ ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ ಬಿಜೆಪಿಯ ಸಂಘಟನಾ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.