ಚಾರ್ಟೆಡ್ ಅಕೌಂಟೆಂಟ್ ಸಂಸ್ಥೆಯಿಂದ ಮೆಗಾ ಕರಿಯರ್ ಕೌನ್ಸೆಲಿಂಗ್ ಕಾರ್ಯಕ್ರಮ
Mega career counseling program from Chartered Accountants Institute
ಬಳ್ಳಾರಿ 28: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ದೆಹಲಿಯ ನಿರ್ದೇಶನದಂತೆ, ಬಳ್ಳಾರಿಯ ಚಾರ್ಟೆಡ್ ಅಕೌಂಟೆಂಟ್ ಸಂಸ್ಥೆಯು ಬಳ್ಳಾರಿ ನಗರ, ಸಿರುಗುಪ್ಪ, ಸಿಂಧನೂರು ಹಾಗೂ ಹೊಸಪೇಟೆ ಕಾಲೇಜುಗಳು ಹಾಗೂ ಪ್ರದೇಶಗಳಲ್ಲಿ ಮೆಗಾ ಕರಿಯರ್ ಕೌನ್ಸೆಲಿಂಗ್ ಕಾರ್ಯಕ್ರಮವನ್ನು ಭವ್ಯವಾಗಿ ಆಯೋಜಿಸಿತು. ಈ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಮೂಲಕ ಚಾರ್ಟರ್ಡ್ ಅಕೌಂಟೆಂಟ್ (ಅಂ) ಕೋರ್ಸ್ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ, ಬಳ್ಳಾರಿ ಶಾಖೆಯ ಚಾರ್ಟರ್ಡ್ ಅಕೌಂಟೆಂಟ್‌ಗಳು 40ಕ್ಕೂ ಹೆಚ್ಚು ಕಾಲೇಜುಗಳಲ್ಲಿ ಒಂದೇ ದಿನದಲ್ಲಿ ಸುಮಾರು 6,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಈ ಕಾರ್ಯಕ್ರಮವು ಆಲ್ ಇಂಡಿಯಾ ಮಟ್ಟದಲ್ಲಿ ಋಂಋ ಮೂಲಕ ನಡೆಸಲಾಗುತ್ತಿದ್ದು, ದೇಶದಾದ್ಯಂತ ಒಂದೂವರೆ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅಂ ಕೋರ್ಸ್ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.ಈ ಸಂಧರ್ಭದಲ್ಲಿ ಜಿಲ್ಲಾ ಅಧ್ಯಕ್ಷರು ಗಜರಾಜ್, ಉಪಾಧ್ಯಕ್ಷರು ಪುರಷೋತ್ತಂ ರೆಡ್ಡಿ, ಕಾರ್ಯದರ್ಶಿ ವಿಶ್ವನಾಥ ಆಚಾರ್ಯ, ಖಜಾಂಚಿ ಸ್ವಪ್ನ ಪ್ರಿಯಾ, ಖಋಂಖಂ ಅಧ್ಯಕ್ಷರು ಶರಣ್ ಪಾಟೀಲ, ಹಾಗೂ ಸದಸ್ಯರಾದ ಹನುಮಂತ ರೆಡ್ಡಿ, ಜಿತೇಂದ್ರ ಸುಥಾರ್, ವೆಂಕಟೇಶ್ ಗುಂಡಾ ಇವರು ಸಕ್ರಿಯವಾಗಿ ಭಾಗವಹಿಸಿದ್ದರು. ಹಾಗೂ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ಸಂಯೋಜಕರಾಗಿ ವೆಂಕಟ್ ನಾರಾಯಣ್ ಅವರು ಕಾರ್ಯನಿರ್ವಹಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 