ಬಳ್ಳಾರಿಯಲ್ಲಿಯೇ ಮೆಗಾಡೇರಿ ನಿರ್ಮಾಣ: ರಾಘವೇಂದ್ರ ಹಿಟ್ನಾಳ್
Mega dairy to be built in Bellary itself: Raghavendra Hitnal
ಬಳ್ಳಾರಿಯಲ್ಲಿಯೇ ಮೆಗಾಡೇರಿ ನಿರ್ಮಾಣ: ರಾಘವೇಂದ್ರ ಹಿಟ್ನಾಳ್
ಬಳ್ಳಾರಿ 08: ಬಳ್ಳಾರಿ ಜಿಲ್ಲೆಯಲ್ಲಿಯೇ ಮೆಗಾಡೇರಿ ನಿರ್ಮಿಸಲಾಗುವುದು ಎಂದು ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷ ಹಾಗೂ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಹೇಳಿದರು.
ಶುಕ್ರವಾರದಂದು ನಗರದ ಕೆಎಂಎಫ್‌ನ ಡೈರಿ ಆಡಳಿತ ಮಂಡಳಿಯ ಸಭಾಂಗಣದಲ್ಲಿ ಏರಿ್ಡಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೆಗಾಡೇರಿ ನಿರ್ಮಾಣಕ್ಕೆ ಬಳ್ಳಾರಿ ತಾಲ್ಲೂಕಿನ ಕೊಳಗಲ್ಲು ಗ್ರಾಮದ ಬಳಿಯ 15 ಎಕರೆ ಪ್ರದೇಶವನ್ನು ಈಗಾಗಲೇ ಗುರುತಿಸಲಾಗಿದ್ದು, ಈಗಾಗಲೇ ಜಿಲ್ಲಾಡಳಿತಕ್ಕೆ ನೀಡಬೇಕಿರುವ 2.92 ಕೋಟಿ ರೂ. ಹಣ ನೀಡುವ ಬಗ್ಗೆ ನಿರ್ದೇಶಕ ಆಡಳಿತ ಮಂಡಳಿ ಸಭೆಯಲ್ಲಿ ಅನುಮೋದಿಸಲಾಗಿದೆ. ದೇಶದಲ್ಲಿಯೇ ಮಾದರಿ ಮೆಗಾಡೇರಿಯನ್ನಾಗಿ ಬಳ್ಳಾರಿಯಲ್ಲಿ ಸ್ಥಾಪಿಸಲಾಗುವುದು ಎಂದರು.ರಾಬಕೊವಿ ವ್ಯಾಪ್ತಿಯಲ್ಲಿ ಹಾಲು ಉತ್ಪಾದನೆಗೆ ಹೆಚ್ಚಿನ ಸಹಕಾರ ನೀಡಲಾಗುವುದು. ಈಗಾಗಲೇ ಕೆಎಂಎಫ್ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ಪಶು ವೈದ್ಯಾಧಿಕಾರಿಗಳನ್ನು ನೇಮಿಸಿ ಜಿಲ್ಲಾವಾರು ಹಂಚಿಕೆ ಮಾಡಲಾಗಿದೆ ಎಂದರು.ಪ್ರಸ್ತುತ ರಾಬಕೊವಿ ಜಿಲ್ಲಾ ಹಾಲು ಒಕ್ಕೂಟವು 2.43 ಲಕ್ಷ ಲೀ. ಹಾಲು ಉತ್ಪಾದನೆ ಇದೆ. ಅದರಲ್ಲಿ ಬಳ್ಳಾರಿ ಜಿಲ್ಲೆಯು 10 ಸಾವಿರ ಲೀ., ವಿಜಯನಗರ ಜಿಲ್ಲೆಯು 1.12 ಲಕ್ಷ ಲೀ., ಕೊಪ್ಪಳ ಜಿಲ್ಲೆಯು 70 ಸಾವಿರ ಲೀ ಮತ್ತು ರಾಯಚೂರು ಜಿಲ್ಲೆಯು 26 ಸಾವಿರ ಲೀ. ಉತ್ಪಾದನೆ ಇದೆ ಎಂದು ತಿಳಿಸಿದ ಅವರು, ನಾಲ್ಕು ಜಿಲ್ಲೆಗಳಲ್ಲಿ ಹಾಲಿನ ಉತ್ಪಾದನೆ ಹೆಚ್ಚಿಸಲು ಹಲವಾರು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.ರಾಬಕೋವಿ ಜಿಲ್ಲಾ ಹಾಲು ಒಕ್ಕೂಟಗಳ ಡೇರಿಗಳ ನಿರ್ವಹಣೆಗೆ ಅನುದಾನ ಮೀಸಲಿರಿಸಲಾಗಿದೆ. ಬಳ್ಳಾರಿ ಡೇರಿಗೆ 1 ಕೋಟಿ ರೂ., ಕೊಪ್ಪಳದ ಬೂದುಗುಂಪಾ ಡೇರಿಗೆ ಸುಮಾರು 4 ರಿಂದ 5 ಕೋಟಿ ರೂ. ಹಾಗೂ ರಾಯಚೂರಿಗೆ ಡೇರಿಗೆ ಕೆಕೆಆರ್‌ಡಿಬಿಯ ಮ್ಯಾಕ್ರೋ ಯೋಜನೆಯಡಿ ರೂ.10 ಕೋಟಿ ಮನವಿ ಸಲ್ಲಿಸಲಾಗಿದೆ ಎಂದರು.
ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ 860 ಸೊಸೈಟಿಗಳಿವೆ. ಇದರಲ್ಲಿ ಹಲವು ಸೊಸೈಟಿಗಳು ಕಾರ್ಯನಿರ್ವಹಿಸುತ್ತಿಲ್ಲ. ಮುಂಬರುವ ದಿನಗಳಲ್ಲಿ ಪ್ರತಿ ತಾಲ್ಲೂಕಿನಲ್ಲಿ ಮೂರು ಸೊಸೈಟಿಗಳನ್ನು ಸ್ಥಾಪಿಸಲಾಗುವುದು. ಒಟ್ಟಾರೆಯಾಗಿ ಹಾಲಿನ ಉತ್ಪಾದನೆಯನ್ನು 2.43 ಲಕ್ಷ ಲೀಟರ್ ನಿಂದ 5 ಲಕ್ಷ ಲೀಟರ್ ಗೆ ಹೆಚ್ಚಿಸುವ ಗುರಿಯನ್ನು ಒಂದಲಾಗಿದೆ ಎಂದರು. ಮೆಗಾಡೇರಿ ನಿರ್ಮಾಣದ ಕಾಮಗಾರಿಯ ಭೂಮಿಪೂಜೆ ಕಾರ್ಯ ನೆರವೇರಿಸಲು ಕ್ರಿಯಾಯೋಜನೆ ಹಂತ-ಹಂತವಾಗಿ ಕಾರ್ಯರೂಪಕ್ಕೆ ತಂದು ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಹೇಳಿದರು.ರಾಬಕೊವಿ ಒಕ್ಕೂಟದ ಕಚೇರಿಯಲ್ಲಿ ಮೊದಲ ಬಾರಿಗೆ ಆಡಳಿತ ಮಂಡಳಿಯ ನಿರ್ದೇಶಕರ ಸಭೆ ನಡೆಸಲಾಗಿದೆ. ರೈತರಿಗೆ ಅನುಕೂಲವಾಗುವಂತಹ ಹಲವಾರು ಅಭಿವೃದ್ಧಿದಾಯಕ ವಿಷಯಗಳನ್ನು ಚರ್ಚಿಸಲಾಗಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಸೇರಿದಂತೆ ಇತರರೊಡನೆ ಕೊಳಗಲ್ಲು ಗ್ರಾಮದಲ್ಲಿ ಮೇಗಾಡೇರಿ ಸ್ಥಾಪಿಸಲು ಗುರುತಿಸಿದ ಸ್ಥಳವನ್ನು ಪರೀಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕಾರಟಗಿಯ ಎನ್.ಸತ್ಯನಾರಾಯಣ, ವ್ಯವಸ್ಥಾಪಕ ನಿರ್ದೇಶಕ ಬಿ.ಆರ್.ಪ್ರಭುಶಂಕರ್ ಹಾಗೂ ಇತರರಿದ್ದರು.
ರಾಷ್ಟ್ರೀಯ ಅಂಕಿ ಅಂಶ ಕಚೇರಿಯ 75ನೇ ವರ್ಷಾಚರಣೆ ಅಂಗವಾಗಿ ದಮ್ಮೂರು ಬೈಕ್ ರಾ್ಯಲಿ, ಜಾಗೃತಿ ಕಾರ್ಯಕ್ರಮಬಳ್ಳಾರಿ 08: ಕೇಂದ್ರ ಸರ್ಕಾರದ ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಮಂತ್ರಾಲಯದ ಅಡಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಮಾದರಿ ಸಮೀಕ್ಷಾ ಕಚೇರಿ (ಕ್ಷೇತ್ರ ಕಾರ್ಯ ವಿಭಾಗ), ಉಪಪ್ರಾದೇಶಿಕ ಕಚೇರಿ ಬಳ್ಳಾರಿ ಇವರ ಸಹಯೋಗದಲ್ಲಿ ರಾಷ್ಟ್ರೀಯ ಮಾದರಿ ಸಮೀಕ್ಷೆಯ (ಎನ್‌ಎಸ್‌ಒ) ರಾಷ್ಟ್ರೀಯ ಅಂಕಿ ಅಂಶ ಕಚೇರಿಯ 75ನೇ ವರ್ಷಾಚರಣೆಯ ಅಂಗವಾಗಿ ಶುಕ್ರವಾರ ದಮ್ಮೂರು ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.
ರಾಷ್ಟ್ರೀಯ ಅಂಕಿ ಅಂಶ ಕಚೇರಿಯ ಸಮೀಕ್ಷೆಗಳ ಮಹತ್ವ ಮತ್ತು ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬಳ್ಳಾರಿ ಉಪಪ್ರಾದೇಶಿಕ ಕಚೇರಿಯಿಂದ ದಮ್ಮೂರು ಗ್ರಾಮದವರೆಗೆ ಬೈಕ್ ರಾ್ಯಲಿ ಆಯೋಜಿಸಲಾಗಿತ್ತು.
ಬಳಿಕ ಜಾಗೃತಿ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಂಕಿ ಅಂಶ ಕಚೇರಿ ಅಧಿಕಾರಿಗಳು ಸಮೀಕ್ಷೆಗಳ ಮೂಲಕ ರಾಷ್ಟ್ರದ ಯೋಜನೆ ಮತ್ತು ನೀತಿ ರೂಪಣೆಗೆ ಅಗತ್ಯವಾದ ವಿಶ್ವಾಸಾರ್ಹ ಸಾಮಾಜಿಕ-ಆರ್ಥಿಕ ಮಾಹಿತಿಯನ್ನು ಸಂಗ್ರಹಿಸುವಲ್ಲಿ ರಾಷ್ಟ್ರೀಯ ಅಂಕಿ ಅಂಶ ಕಚೇರಿ ಪಾತ್ರವನ್ನು ದೃಶ್ಯ ಪ್ರದರ್ಶನದ ಮೂಲಕ ಗ್ರಾಮಸ್ಥರಿಗೆ ವಿವರಿಸಿದರು.
ದಮ್ಮೂರು ಗ್ರಾಮದ ದುರ್ಗಮ್ಮ ದೇವಾಲಯದ ಆವರಣ, ಗ್ರಾಮ ಪಂಚಾಯತಿ ಕಚೇರಿ ಮತ್ತು ದಮ್ಮೂರು ವೆಂಕಪ್ಪ ತಾತ ಮಠದ ಆವರಣದಲ್ಲಿ ವೃಕ್ಷಾರೋಪಣಾ ಅಭಿಯಾನ ನಡೆಸಿ ಪರಿಸರ ಸಂರಕ್ಷಣೆ ಉಪಕ್ರಮದ ಅಂಗವಾಗಿ ದಮ್ಮೂರು ಗ್ರಾಮದ ನಿವಾಸಿಗಳಿಗೆ 200 ಸಸಿಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ರಾಷ್ಟ್ರೀಯ ಅಂಕಿ ಅಂಶ ಕಚೇರಿ (ಕ್ಷೇತ್ರ ಕಾರ್ಯ ವಿಭಾಗ) ಅಧಿಕಾರಿಗಳು, ಹುಬ್ಬಳ್ಳಿ ಪ್ರಾದೇಶಿಕ ಕಚೇರಿಯ ನಿರ್ದೇಶಕ ಹರೀಶ್ವರನ್, ಜಿಲ್ಲಾ ಅಂಕಿಅಂಶಾಧಿಕಾರಿ ಪತ್ರಿಬಸಪ್ಪ ಸೇರಿದಂತೆ ಉಪಪ್ರಾದೇಶಿಕ ಕಚೇರಿಯ ಹಿರಿಯ ಅಂಕಿಅಂಶಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.ಮರು ವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ನೋಂದಣಿಗೆ ಆಹ್ವಾನಬಳ್ಳಾರಿ 08: ಜಿಲ್ಲೆಯಲ್ಲಿ ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ತಮ್ಮ ಬೆಳೆಗಳ ವಿಮೆಗೆ ನೋಂದಾಯಿಸಿಕೊಳ್ಳಬಹುದು ಎಂದು ಜಿಪಂ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ ಸಪ್ಪಂಡಿ ಅವರು ತಿಳಿಸಿದ್ದಾರೆ.
ಪ್ರಕೃತಿ ವಿಕೋಪಗಳು, ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ, ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಬೆಳೆ ವಿಮೆ ಘಟಕ(ಗ್ರಾಮಪಂಚಾಯಿತಿ)ವಾರು ನಿರ್ಧರಿಸಿ ಬೆಳೆ ನಷ್ಟದ ಪರಿಹಾರವನ್ನು ನೀಡುವುದರ ಮೂಲಕ ರೈತರಿಗೆ ನೆರವಾಗುವುದು ಮರುವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆವಿಮೆ ಯೋಜನೆ ಮುಖ್ಯ ಉದ್ದೇಶವಾಗಿದೆ.
ವಿಮಾ ಯೋಜನೆಯಡಿ ಒಳಪಡುವ ಬೆಳೆಗಳು ಹಸಿ ಮೆಣಸಿನಕಾಯಿ ಮತ್ತು ದಾಳಿಂಬೆ ಬೆಳೆಗಳಾಗಿವೆ.*ಹಸಿ ಮೆಣಸಿನಕಾಯಿ:*
ಬಳ್ಳಾರಿ, ಕಂಪ್ಲಿ, ಕುರುಗೋಡು, ಸಿರುಗುಪ್ಪ, ಸಂಡೂರು ತಾಲ್ಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿಗಳು ವಿಮೆಗೆ ಒಳಪಡುವ ಪ್ರದೇಶಗಳಾಗಿದ್ದು, ಪ್ರತಿ ಹೆಕ್ಟರ್‌ಗೆ ವಿಮಾ ಮೊತ್ತ ರೂ.71 ಸಾವಿರ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.3550 ಆಗಿರುತ್ತದೆ.*ದಾಳಿಂಬೆ:*ಬಳ್ಳಾರಿ, ಕಂಪ್ಲಿ, ಕುರುಗೋಡು, ಸಿರುಗುಪ್ಪ, ಸಂಡೂರು ತಾಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿಗಳು ವಿಮೆಗೆ ಒಳಪಡುವ ಪ್ರದೇಶಗಳಾಗಿದ್ದು, ಪ್ರತಿ ಹೆಕ್ಟರ್‌ಗೆ ವಿಮಾ ಮೊತ್ತ 1 ಲಕ್ಷ 27 ಸಾವಿರ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.6,350 ಆಗಿರುತ್ತದೆ.
ರೈತರು ಅಗತ್ಯ ದಾಖಲೆಗಳೊಂದಿಗೆ ಎರಡು ಬೆಳೆಗಳ ವಿಮೆಗೆ ನೋಂದಾಯಿಸಿಕೊಳ್ಳಲು ಆಗಸ್ಟ್ 11 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮತ್ತು ಕುರುಗೋಡು, ಕಂಪ್ಲಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ: 08392-278177 ಹಾಗೂ ಮೊ.9448511649, ಸಂಡೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ:08395-260389 ಹಾಗೂ ಮೊ.9740934208, ಸಿರುಗುಪ್ಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿಪಂ) ದೂ:08396-222066 ಹಾಗೂ ಮೊ.9448910277 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 